ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆ ರಾಜ್ಯಕ್ಕೆ ಸಿಕ್ಕಿದ್ದೂ, ಏಪ್ರಿಲ್ 13ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಮಾಡಿದೆ. ರಾಜ್ಯ
ಹಾಗೆಯೇ ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆ (Heavy Rain) ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ. ರಾಜ್ಯ
ಇದನ್ನೂ ಓದಿ: ನೋಡಲೇಬೇಕಾದ ಸಿನಿಮಾ “‘ಫುಲೆ”
ಏ. 14ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ
ಏ.15ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿಮ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.16ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.17ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ನೋಡಿ: ವಚನಾನುಭವ – 26 |ಅಂಬಿಗರ ಚೌಡಯ್ಯನ ವಚನ ; ಹರಿ ಹರಿಯೆಂದು ಹೊಡವಡುವಿರಿ. ನಿಮ್ಮ ನಡೆಯಲ್ಲಾ ಅನಾಚಾರ Janashakthi Media