ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚಿಸಿ ಜೈಲುಪಾಲಾಗಿದ್ದ ಉಗ್ರ ಭಾಷಣಗಾರ್ತಿ ಚೈತ್ರಾ ಕುಂದಾಪುರಗೆ ಕೊನೆಗೂ ಜಾಮೀನು ಸಿಕ್ಕಿದೆ. ವಂಚನೆ
ಕಳೆದ ವಿಧಾನಸಭೆಗೂ ಮುನ್ನ ಆರೇಳು ತಿಂಗಳ ಹಿಂದೆ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ, ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮಿ ಮತ್ತು ಗ್ಯಾಂಗ್ 4 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿತ್ತು. ನಂತರ ಈ ಬಗ್ಗೆ ಅನುಮಾನ ಬಂದ ಮೇಲೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು. ವಂಚನೆ
ಇದನ್ನೂ ಓದಿ:ಬಿಜೆಪಿ ಟಿಕೆಟ್ ಹಗರಣ | ಚೈತ್ರಾ ಕುಂದಾಪುರ ಮತ್ತು ಸಹಚರರ ವಿರುದ್ಧ 800 ಪುಟಗಳ ಆರೋಪ ಪಟ್ಟಿ ಸಲ್ಲಿಕೆ
ಇದೀಗ ಉದ್ಯಮಿಗೆ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್ನಲ್ಲಿ ಬಂಧಿತಳಾಗಿದ್ದ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು (ಮಂಗಳವಾರ) ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ.