ತಿರುವನಂತಪುರ: ತಿದ್ದುಪಡಿ ತರಲಾದ ಕೇರಳದ ಪೊಲೀಸ್ ಕಾಯ್ದೆಯನ್ನು ಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಾಯ್ದೆ ತಿದ್ದುಪಡಿಗೆ ಸಮಾಜದ ವಿವಿಧ ಸ್ತರಗಳಿಂದ ವ್ಯಕ್ತವಾದ ತೀವ್ರ ವಿರೋಧ, ಆಕ್ಷೇಪಗಳ ಹಿಂದೆಯೇ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರ ಈ ತೀರ್ಮಾನವನ್ನು ಕೈಗೊಂಡಿದೆ.
ಇದನ್ನೂ ಓದಿ: ಈಗ ಕೇರಳ ಎಲ್‌ಡಿಎಫ್ ಸರಕಾರದ ಮೇಲೆ ಗುರಿ
ಪ್ರಜಾಪ್ರಭುತ್ವದ ರಕ್ಷಣೆಗೆ ಒತ್ತಾಸೆಯಾಗಿ ನಿಂತು ಎಲ್‌ಡಿಎಫ್ ಬೆಂಬಲಿಗರು ಸುಗ್ರೀವಾಜ್ಞೆ ಕುರಿತು ವ್ಯಕ್ತಪಡಿಸಿರುವ ಆತಂಕವನ್ನು ಗಮನದಲ್ಲಿ ಇಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದನ್ನೂ ಓದಿ: ಆಕ್ಷೇಪಾರ್ಹ ಪ್ರಕಟಣೆ, ಪ್ರಸಾರಗಳ ವಿರುದ್ಧ ಕ್ರಮ: ಕೇರಳ ಕಾನೂನು
ಸದ್ಯ, ತಿದ್ದುಪಡಿ ಕಾಯ್ದೆ ಜಾರಿಗೊಳಿಸುವ ಚಿಂತನೆ ಇಲ್ಲ. ವಿಧಾನಸಭೆಯಲ್ಲಿ ಈ ಕುರಿತು ವಿಸ್ತೃತವಾದ ಚರ್ಚೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಅವರು ಹೇಳಿದರು.