ತಿರಂಗ ಯಾತ್ರೆಯ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ : ಸಚಿವ ಬಿ.ಸಿ ನಾಗೇಶ್‌ ವಿರುದ್ಧ ದೂರು ದಾಖಲು

ತುಮಕೂರು: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ವತಿಯಿಂದ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಭಾಗವಹಿಸಿದ್ದ ವೇಳೇಯಲ್ಲಿ ಸಚಿವ ಬಿಸಿ ನಾಗೇಶ್‌ ಅವರು ಎಬಿವಿಪಿ ಧ್ವಜದ ಕೆಳಗೆ ಭಾರತದ ತಿರಂಗ ಹಿಡಿದುಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ವತಿಯಿಂದ ಇಂದು (ಗರುವಾರ) ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಎಬಿವಿಪಿ ಧ್ವಜವನ್ನು ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡಿರುವುದು ವೈರಲ್ ಆಗುತ್ತಿರುವ ಚಿತ್ರಗಳಲ್ಲಿ ಕಾಣಿಸುತ್ತದೆ.

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್‌ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ. ಬಿ.ಸಿ ನಾಗೇಶ್‌ ವಿರುದ್ಧ ಧ್ವಜಸಂಹಿತೆಯಡಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಳ್ಳಬೇಕು ಎಂದು ಅನೇಕರು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

 

ದೂರು ದಾಖಲು : ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ದೂರು ನೀಡಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ಡಿವೈಎಸ್ಪಿ ಕಚೇರಿಗೆ ಯುವ ಕಾಂಗ್ರೆಸ್ ಮುಖಂಡ ಬಿ.ವಿ. ಹರಿಪ್ರಸಾದ್ ನೀಡಿದ್ದಾರೆ.

ದೂರಿನಲ್ಲಿ ಶಾಲಾ ಸಿಬ್ಬಂದಿ ವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡ ತ್ರಿವರ್ಣ ಧ್ವಜದ ಮೇಲೆ ಎಬಿವಿಪಿ ಹಾರಿಸಿ ನಮ್ಮ ತಿರಂಗಕ್ಕೆ ಅವಮಾನ ಮಾಡಿದ್ದಾರೆ. ಶಾಲಾ ಮಕ್ಕಳನ್ನು ಇಂತಹ ದೇಶ ವಿರೋಧಿ ಚಟುವಟಿಕಗಳಿಗೆ ಬಳಿಸಿಕೊಂಡಿರುವುದು ದುರ್ದೈವದ ಸಂಗತಿ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *