ಬೆಂಗಳೂರು: ನಗರದ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಉಪನ್ಯಾಸಕ ಕಿರುಕುಳಕ್ಕೆ ಬೇಸತ್ತು ಖಾಸಗಿ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 8ರಂದು ನಡೆದಿರುವುದಾಗಿ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಯಶಸ್ವಿನಿ (23) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮಲಯಾಳಂ ಭಾಷಾ ಮಸೂದೆ 2025 | ಮಸೂದೆಯಲ್ಲಿ ಏನಿದೆ? ವಿರೋಧ ಸರಿಯೇ? ಸಿಎಂ ಸೇರಿ ವಿವಿಧ ಗಣ್ಯರ ಪ್ರತಿಕ್ರಿಯೆ ಹೀಗಿದೆ…
ಬೆಂಗಳೂರಿನ ಬೊಮ್ಮನಹಳ್ಳಿಯ ಖಾಸಗಿ ಡೆಂಟಲ್ ಕಾಲೇಯೊಂದರ ವಿದ್ಯಾರ್ಥಿಯಾಗಿರುವ ಯಶಸ್ವಿನಿ, ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿ ವಿಭಾಗದಲ್ಲಿ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿ ಓದುತ್ತಿದ್ದಳು. ಕಣ್ಣು ನೋವಾಗಿದ್ದರಿಂದ ಯಶಸ್ವಿನಿ ಜನವರಿ 7ರಂದು ಕಾಲೇಜಿಗೆ ರಜೆ ಹಾಕಿದ್ದಳು. ಮರುದಿನ ಕಾಲೇಜಿಗೆ ಹೋದಾಗ ವಿದ್ಯಾರ್ಥಿಗಳ ಮುಂದೆ ಆಕೆಗೆ ಉಪನ್ಯಾಸಕ ಅವಮಾನ ಮಾಡಿರುವುದಾಗಿ ಆರೋಪಿಸಲಾಗಿದೆ.
‘ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ, ಎಷ್ಟು ಹನಿ ಹಾಕಿಕೊಂಡೆ? ಇಡೀ ಬಾಟಲಿ ಸುರಿದುಕೊಂಡಾ?’ ಎಂದೆಲ್ಲ ವ್ಯಂಗ್ಯವಾಗಿ ಪ್ರಶ್ನಿಸಿ ಉಪನ್ಯಾಸಕ ಅವಮಾನಿಸಿದ್ದಾರೆ. ಅಲ್ಲದೇ, ಯಶಸ್ವಿನಿಗೆ ಸೆಮಿನಾರ್‍ಗೆ ಅವಕಾಶ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಆರೋಪಿಸಿದ್ದಾರೆ.
ಕಿರುಕುಳ ಕೊಟ್ಟ ಉಪನ್ಯಾಸಕ ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಚಂದಾಪುರ ಆಸ್ಪತ್ರೆಯ ಶವಾಗಾರದ ಮುಂದೆ ಯಶಸ್ವಿನಿ ಪೋಷಕರ ಜತೆಗೆ ಕಾಲೇಜು ವಿದ್ಯಾರ್ಥಿಗಳು ಜನವರಿ 9ರಂದು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ನೋಡಿ: ವೆನೆಜುವೇಲಾದ ಮೇಲೆ ಯುದ್ದ ಹೂಡಿದರೆ ,ಯು.ಎಸ್ ಗೆ ಅದು ಇನ್ನೊಂದು ವಿಯೇಟ್ನಾಂ ಆಗುತ್ತದೆ! ಇರಾಕ್, ಲಿಬ್ಯ ಅಲ್ಲ !
