ಬೆಳಗಾವಿ : ಕಿರುಕುಳಕ್ಕೆ ಬೇಸತ್ತು ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ

ಬೆಳಗಾವಿ: ಸೋಮವಾರ ರಾತ್ರಿ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಹಶೀಲ್ದಾರ್‌ ಕಚೇರಿಯಲ್ಲೇ ನಡೆದಿದೆ.

ಎಸ್‌ಡಿಸಿ ರುದ್ರೇಶ ಯಾದವಣ್ಣವರ (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಸೋಮವಾರ ರಾತ್ರಿ ಆಗಿರಬಹುದು. ಮಂಗಳವಾರ ಬೆಳಿಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಬಂದ ಮೇಲೆಯೇ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: ದೇವಾಲಯದಲ್ಲಿ ತೀರ್ಥ ಎಂದು ಭಾವಿಸಿ ಎಸಿಯಿಂದ ತೊಟ್ಟಿಕ್ಕುತ್ತಿದ್ದ ನೀರನ್ನು ಸೇವಿಸಿದ ಭಕ್ತರು, ಹುಚ್ಚುತನ ಅಂದ್ರೆ ಇದೇ ಇರಬೇಕು ಎಂದ ನೆಟ್ಟಿಗರು!

ಬೆಳಗಾವಿ ರಿಸಾಲ್ದಾರಗಲ್ಲಿರುವ ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಕಚೇರಿಯಲ್ಲಿ ರುದ್ದಣ್ಣಾ ತಮ್ಮ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಖಡೇ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ನೋಡಿ: ಮೆಟ್ರೋ ರೈಲಿಗಾಗಿ 1 ಕಿಮೀ ಕ್ಯೂ ನಿಂತ ಪ್ರಯಾಣಿಕರು Janashakthi Media

Donate Janashakthi Media

Leave a Reply

Your email address will not be published. Required fields are marked *