ಕೊಲ್ಕತ್ತಾ: ತ್ರಿಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಕೃಷ್ಣ ಚಕ್ರವರ್ತಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಧನ್ನಗರ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಜೂನ್ 4ರಂದು ರಾಜೀನಾಮೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೇಯರ್
ಟಿಎಂಸಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಚಕ್ರವರ್ತಿ ಅವರು, ತಮ್ಮ ರಾಜೀನಾಮೆ ಪತ್ರವನ್ನು ದಿನದ ಆರಂಭದಲ್ಲೇ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು| ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
“ಇದು ಸಂಪೂರ್ಣವಾಗಿ ನನ್ನ ವೈಯಕ್ತಿಕ ನಿರ್ಧಾರ. ನಾನು 16 ವರ್ಷಗಳಿಂದ ಈ ಹುದ್ದೆಯಲ್ಲಿ ಇದ್ದೇನೆ. ನನಗೆ ಯಾರ ಮೇಲೂ ಅಸಮಾಧಾನ ಇಲ್ಲ. ನಿಯಮಾನುಸಾರವಾಗಿ ರಾಜೀನಾಮೆ ನೀಡಿದ್ದೇನೆ. ನನಗೆ ಸ್ವಲ್ಪ ಸಮಯ ಕೊಟ್ಟುಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನು ಕೌನ್ಸಿಲರ್ ಆಗಿ ಕೆಲಸ ಮಾಡಲು ಬಯಸುತ್ತೇನೆ,” ಎಂದು ಚಕ್ರವರ್ತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಗರಪಾಲಿಕೆ ಅಧಿಕಾರಿಗಳು ಅವರ ರಾಜೀನಾಮೆ ಪತ್ರ ಸ್ವೀಕರಿಸಿರುವುದನ್ನು ದೃಢಪಡಿಸಿದ್ದಾರೆ.
“ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ಆಸೆಯನ್ನು ವ್ಯಕ್ತಪಡಿಸಿರುವ ಪತ್ರವನ್ನು ನಮಗೆ ನೀಡಿದ್ದಾರೆ. ತಮ್ಮ ರಾಜೀನಾಮೆಯ ಪ್ರತಿಗಳನ್ನು ನಗರಾಭಿವೃದ್ಧಿ ಸಚಿವರಿಗೆ ಹಾಗೂ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೂ ಕಳುಹಿಸಿದ್ದಾರೆ,” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ನೋಡಿ: ಬೆಂಗಳೂರಿನ ಸರಕಾರಿ ಶಾಲೆಗಳ ದುಸ್ಥಿತಿಗೆ ಯಾರು ಹೊಣೆ? – ಜಯರತ್ನ Janashakthi Media
