ವಿಡಿಯೋ ಕಾನ್ಫರೆನ್ಸ್​ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ವಕೀಲ ಅಮಾನತು

  • ಮದ್ರಾಸ್ ಹೈಕೋರ್ಟ್ ವಿಚಾರಣೆ ವೇಳೆ ವಕೀಲನ ಅನುಚಿತ ವರ್ತನೆ
  • ಅಸಭ್ಯ ವರ್ತನೆಯಿಂದ ಅಸಮಾಧಾನ, ನ್ಯಾಯಾಂಗ ನಿಂದನೆ ಪ್ರಕರಣ
  • ಎಲ್ಲಾ ಬಗೆಯ ವಕೀಲಿಕೆ ಕಾರ್ಯಗಳಿಂದ ಸಾಂತನ ಕೃಷ್ಣನ್ ಅಮಾನತು

ಚೆನ್ನೈ: ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮದ್ರಾಸ್ ಹೈಕೋರ್ಟ್‌ ವಕೀಲನೊಬ್ಬನನ್ನು ಅಮಾನತುಗೊಳಿಸಿದೆ.

ಆರ್‌ಡಿ ಸಂತಾನ ಕೃಷ್ಣನ್ ಅವರನ್ನು ಅನುಚಿತ ವರ್ತನೆ ಆರೋಪದ ಮೇಲೆ ಅಮಾನತು ಮಾಡಲಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಈ ಶಿಸ್ತುಕ್ರಮ ಪೂರ್ಣಗೊಳ್ಳುವವರೆಗೆ ಅವರು ಭಾರತದ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಇತರ ಪ್ರಾಧಿಕಾರಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ ಎಂದು ತಮಿಳುನಾಡು ಮತ್ತು ಪುದುಚೇರಿಯ ಬಾರ್ ಕೌನ್ಸಿಲ್ ಆದೇಶ ನೀಡಿದೆ.

ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರಾದ ಪಿ.ಎನ್ ಪ್ರಕಾಶ್ ಮತ್ತು ಆರ್.ಹೇಮಲತಾ ಅವರು ಸಂತಾನಕೃಷ್ಣನ್ ವಿರುದ್ಧ ದೂರು ದಾಖಲಿಸಿದ್ದು, ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸಿ ಡಿಸೆಂಬರ್ 23ರಂದು ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಸೋಮವಾರ ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿದ್ದಾಗ, ಮಹಿಳೆಯೊಂದಿಗೆ ಸಂತಾನ ಕೃಷ್ಣನ್ ಅನುಚಿತವಾಗಿ ವರ್ತನೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಕ್ಲಿಪ್ಪಿಂಗ್ ಪ್ರಸಾರವಾಗದಂತೆ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್​ ಆಯುಕ್ತರಿಗೂ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿತ್ತು.

Donate Janashakthi Media

Leave a Reply

Your email address will not be published. Required fields are marked *