ಮಂಗಳೂರು: ದ.ಕ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸರಕಾರಿ ನರ್ಮ್ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ ) ಮನವಿ ಪತ್ರ ಸಲ್ಲಿಸಿದೆ.
ಕರ್ನಾಟಕ ರಾಜ್ಯಾದ್ಯಂತ ಸರಕಾರಿ ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ ನಡೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರಕಾರಿ ಕೆಎಸ್‌ಆರ್‌ಟಿಸಿ ಬಸ್ಸ್ ಕೊರೋನಾ ಕಾಲದ ನಂತರ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದ ಕಾರಣ ಸೇವೆಯಲ್ಲಿ ಬಹಳಷ್ಟು ವ್ಯತ್ಯಯ ಕಂಡು ಪ್ರಯಾಣಿಕರು ಬಹಳಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಮಾತ್ರವಲ್ಲ ಈಗ ಮಹಿಳೆಯರು ಸರಕಾರದ ಶಕ್ತಿ ಯೋಜನೆ ಈ ಸೌಲಭ್ಯದಿಂದಲೂ ವಂಚಿತರಾಗುತ್ತಿದ್ದಾರೆ. ಎಂದು ತಮ್ಮ ಕಳವಳವನ್ನ ಪತ್ರದ ಮುಲಕ ತಮ್ಮ ವ್ಯಕ್ತಪಡಿಸಿದ್ದಾರೆ.
ನರ್ಮ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35 ರಷ್ಟು ಸರಕಾರಿ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ ಮಂಜೂರಾದ 35 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್ಸು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ ನೀಡಿದ್ದವು. ಆ ಸಂದರ್ಭ ಖಾಸಗೀ ಬಸ್ ಮಾಲಿಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದೆಯಾದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ನಿರ್ದೇಶನ ನೀಡಿತ್ತು. ಒಟ್ಟಾರೆ ಖಾಸಗೀ ಬಸ್ಸು ಮಾಲಿಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ಸರಕಾರಿ ನರ್ಮ್ ನಗರ ಸಾರಿಗೆ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಅದರ ಜೊತೆ ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರಕಾರಿ ಗ್ರಾಮಾಂತರ ಸಾರಿಗೆ ಬಸ್ಸು ನಿರಂತರ ಸೇವೆಯನ್ನು ನೀಡಿದೆ. ಆದರೆ ಇತ್ತೀಚೆಗೆ ಕೊರೋನಾ ಕಾಲದಲ್ಲಿ ಸ್ಥಗಿತಗೊಂಡಿರುವ ಸರಕಾರಿ ಬಸ್ ಸಂಚಾರ ಸೇವೆಯು ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ ಎಂದು ಅಸಮಾಧಾವನ್ನ ವ್ಯಕ್ತಪಡಿಸಿದ್ದಾರೆ.
ಇದ್ದನೂ ಓದಿ:ಉಚಿತ ಬಸ್ ಪಾಸ್ : ಮಹಿಳಾ ಸಶಕ್ತೀಕರಣಕ್ಕೆ “ಶಕ್ತಿ” ತುಂಬಬಹುದೆ?
ಸರಕಾರಿ ನರ್ಮ್ ನಗರ ಸಾರಿಗೆ ಬಸ್ಸು ಮತ್ತು ಗ್ರಾಮೀಣ ಭಾಗದ ಸರಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ. ಜಿಲ್ಲೆಯಲ್ಲಿ ಖಾಸಗೀ ಬಸ್ಸುಗಳ ಭರಾಟೆಯ ನಡುವೆ ಸರಕಾರಿ ಬಸ್ಸುಗಳು ಮೂಲೆಗುಂಪಾಗ ತೊಡಗಿದೆ. ಇದರಿಂದಾಗಿ ಬಹುತೇಕ ಕಡಿಮೆ ಆದಾಯಕ್ಕೆ ದುಡಿಯುವ ಜನ ಸಾಮಾನ್ಯರು ಸಮಸ್ಯೆಯನ್ನು ಉಂಟಾಗುತ್ತಿದೆ ಎಂದು ಆಂತಕವನ್ನ ವ್ಯಕ್ತಪಡಿಸಿದ್ದಾರೆ.
ಜೂನ್ 11 ರಿಂದ ಸರಕಾರ ಫೋಷಿಸಿದ ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು ಅಂತ ಮಹಿಳೆಯರಿಗೆ ಸರಕಾರದ ಈ ಯೋಜನೆಯು ಅನುಕೂಲಕರವಾಗಲಿದೆ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಏರ್ಟಿಸಿ ಸರಕಾರಿ ನಗರ ಸಾರಿಗೆ ನರ್ಮ್ ಬಸ್ಸ್ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸುವಂತೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷರು ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್ ರವರು ಜಿಲ್ಲಾಧಿಕಾರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.