ಖಾಸಗಿ ಕಾಲೇಜಿನ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ವಿಡಿಯೋ, ಯುವಕನ ಬಳಿ ಇತ್ತು 8 ಸಾವಿರ ಕ್ಲಿಪ್ಸ್‌!

ಬೆಂಗಳೂರು :ಖಾಸಗಿ ಕಾಲೇಜಿನ ಟಾಯ್ಲೆಟ್ ರೂಮ್‌ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಚಿತ್ರಿಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ.

ಕಾಲೇಜಿನ ಲೇಡಿಸ್ ಟಾಯ್ಲೆಟ್ ರೂಮ್‌ನಲ್ಲಿ ಅದೇ ಕಾಲೇಜಿನ ಕುಶಾಲ್ ಎಂಬ ವಿದ್ಯಾರ್ಥಿ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದನ್ನು ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ನೋಡಿದ್ದಾರೆ.

ಟಾಯ್ಲೆಟ್‌ ಒಳಗಡೆ ಕ್ಯಾಮೆರಾ ಇರುವುದನ್ನು ನೋಡಿ ವಿದ್ಯಾರ್ಥಿನಿ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾಳೆ. ಈ ವೇಳೆ ಕ್ಯಾಮೆರಾ ಇಟ್ಟ ಕುಶಾಲ್ ನನ್ನು ಇತರ ವಿದ್ಯಾರ್ಥಿಗಳು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಇದನ್ನು ಖಂಡಿಸಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.

ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಕುಂಬಳಗೂಡು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ಕುಶಾಲ್‌ ಸಿಸಿಟಿವಿ ಮಾದರಿಯ ಕ್ಯಾಮರಾ ಇಟ್ಟಿದ್ದ ಎಂದು ಹೇಳಲಾಗುತ್ತಿದೆ. ಅದೇ ಕಾಲೇಜಿನ (ACS) ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕುಶಾಲ್‌ ಓದುತ್ತಿದ್ದು, ಆತನಿಂದಲೇ ಈ ಕೃತ್ಯ ನಡೆದಿದೆ ಎಂದು ಆರೋಪ ಮಾಡಿದ ಬಳಿಕ, ಕ್ಯಾಮೆರಾ ಇಟ್ಟಿದ್ದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

8 ಸಾವಿರ ವೀಡಿಯೋ ಕ್ಲಿಪ್ ಗಳು: ವಿದ್ಯಾರ್ಥಿಯ ಬಳಿ ಒಟ್ಟು 8 ಸಾವಿರ ವಿಡಿಯೋ ಕ್ಲಿಪ್‌ಗಳಿಗೆ ಎಂದು ಹೇಳಲಾಗುತ್ತಿದೆ. ಕೆಲ ತಿಂಗಳಿಂದ ವೀಡಿಯೋ ರೆಕಾರ್ಡ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇನ್ನು ಈ ಘಟನೆಯಿಂದ ವಿದ್ಯಾರ್ಥಿನಿಯರು ಆತಂಕದಲ್ಲಿದ್ದಾರೆ. ಘಟನೆಯ ಬಗ್ಗೆ ಪೋಷಕರಿಗೂ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *