ಟೋಕಿಯೊ: ಒಲಿಂಪಿಕ್ಸ್ ಪಂದ್ಯಾವಳಿಯ ಬಾಕ್ಸಿಂಗ್ ವಿಭಾಗದಲ್ಲಿ ಭಾರತ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದ ಎರಡನೇ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಚೀನಾದ ಎನ್ ಸಿ ಚೆನ್ ವಿರುದ್ಧ 4-1 ಅಂತರದಲ್ಲಿ ಲೊವ್ಲಿನಾ ಬೊರ್ಗೊಹೈನ್ ಭರ್ಜರಿ ಜಯ ಸಾಧಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದೆ. ಭಾರತದ ಪರ ಪದಕ ಗೆದ್ದಿರುವ ಏಕೈಕ ಆಟಗಾರ್ತಿ ಮೀರಾಬಾಯಿ ಚಾನು ಮಾತ್ರ. ಸೈಕೋಮ್ ಮೀರಾಬಾಯಿ ಚಾನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಕ್ರೀಡಾಪಟು ಕೂಡ ಪದಕವನ್ನು ಗೆದ್ದಿಲ್ಲ. ಪದಕಗಳ ಪಟ್ಟಿಯಲ್ಲಿ ಭಾರತವು 48ನೇ ಸ್ಥಾನದಲ್ಲಿದೆ.
ಗುರುವಾರದಂದು ಲಂಡನ್ ಒಲಿಂಪಿಕ್ಸ್‌ನಲ್ಲಿ ಬಾಕ್ಸರ್ ಮೇರಿ ಕೋಮ್ ಪ್ರೀ-ಕ್ವಾರ್ಟರ್ ಫೈನಲ್‌ನಲ್ಲಿ ಸೋತು ನಿರಾಶೆಗೊಂಡರು. ಆದರೆ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆಲುವು ಖಚಿತವಾಗತೊಡಗಿದೆ. ಲೊವ್ಲಿನಾ ಬೊರ್ಗೊಹೈನ್ ಇದೀಗ ಕಂಚಿನ ಪದಕ ಖಚಿತ ಪಡಿಸಿಕೊಂಡಿದ್ದು, ಸೆಮಿಫೈನಲ್‌ನಲ್ಲಿ ಗೆಲುವು ದಾಖಲಿಸಿದರೆ ಚಿನ್ನ ಅಥವಾ ಬೆಳ್ಳಿ ಪದಕಕ್ಕಾಗಿ ಫೈಪೋಟಿ ನಡೆಸಬಹುದಾಗಿದೆ.
ಇದನ್ನು ಓದಿ: ಬಾಕ್ಸರ್ ಮೇರಿ ಕೋಮ್ ಒಲಿಂಪಿಕ್ಸ್ ಪಂದ್ಯದಿಂದ ಹೊರಕ್ಕೆ
ಪದಕ ಗೆಲ್ಲುವ ನಿರೀಕ್ಷೆಯಲ್ಲಿ ಪಿ ವಿ ಸಿಂಧು, ಅತನು ದಾಸ್, ದೀಪಿಕಾ ಕುಮಾರಿ ಮತ್ತು ಭಾರತದ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು ಗೆಲುವು ಸಾಧಿಸಿಕೊಡುವ ಅವಕಾಶ ಜೀವಂತದೆ. ಇವರೊಂದಿಗೆ ಭಾರತದ ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶ ಮಾಡಿದ್ದು, ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾಗಿದೆ.