ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ

ಈ ತರಬೇತಿಯನ್ನು ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ

ಇದನ್ನೂ ಓದಿ: ಮಂಡ್ಯ| ರಸ್ತೆಯಲ್ಲಿ ಮಾನಸಿಕ ಅಸ್ವಸ್ಥ ತಾಯಿಯನ್ನು ಬಿಟ್ಟು ಹೋದ ಮಗ

ತರಬೇತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ದೊಂದಿಗೆ ಉಚಿತ ತರಬೇತಿ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್: http://karnatakatourism.org, ಸೇವಾಸಿಂಧು ಪೋರ್ಟಲ್: http://sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ: http://bsk.karnataka.gov.in ಗಳಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.

ತರಬೇತಿ ವಿವರ

ಆಹಾರ ಮತ್ತು ತಂಪು ಪಾನೀಯಗಳ ವಿತರಣೆ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು. ಕೊಠಡಿ ನಿರ್ವಹಣೆ ತರಬೇತಿಗೆ ಕನಿಷ್ಠ 5ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು.

ಈ ಎರಡು ತರಬೇತಿಗಳನ್ನು 3 ತಿಂಗಳ ಅವದಿಗೆ ನೀಡಲಾಗುವುದು ಹಾಗೂ ವಿವಿಧ ಆಹಾರ ತಯಾರಕರ ತರಬೇತಿಗೆ ಕನಿಷ್ಠ 8ನೇ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ತರಬೇತಿಯನ್ನು 4 ತಿಂಗಳ ಅವಧಿಗೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವ0ತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ನೋಡಿ: ವಚನಾನುಭವ 30| ಅಲ್ಲಮನ ವಚನ | ಅರಿವಿನ ಜಾಗೃತಿ – ಡಾ. ಮೀನಾಕ್ಷಿ ಬಾಳಿ Janashakthi Media

Donate Janashakthi Media

Leave a Reply

Your email address will not be published. Required fields are marked *