ಪೋರ್ಟ್‌ ಬ್ಲೇರ್ಅಂ | ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ಪ್ರವಾಸೋದ್ಯಮ ಸಮೀಕ್ಷೆ

ಪೋರ್ಟ್‌ ಬ್ಲೇರ್: ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ‘ದೇಶೀಯ ಪ್ರವಾಸೋದ್ಯಮ ವೆಚ್ಚ ಸಮೀಕ್ಷೆ’ಯನ್ನು ಕೇಂದ್ರ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯವು ಆರಂಭಿಸಿದೆ.

ಇದು ಪ್ರವಾಸೋದ್ಯಮ ಇಲಾಖೆಗೆ, ಯೋಜನೆ ತಯಾರಿಸಲು ನೆರವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಉತ್ತಮ ಪ್ರವಾಸೋದ್ಯಮ ನೀತಿಗಳು ಹಾಗೂ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ದೇಶೀಯ ಪ್ರವಾಸಗಳಿಗೆ ಸಂಬಂಧಿಸಿದಂತೆ ಖರ್ಚು ವೆಚ್ಚ, ವಸತಿ, ಸಾರಿಗೆ, ಆಹಾರ ಮತ್ತು ಪ್ರವಾಸಿಗರ ವಿವರ ಸೇರಿದಂತೆ ಸಂಪೂರ್ಣ ಮಾಹಿತಿ ಕಲೆ ಹಾಕಲು ಈ ಸಮೀಕ್ಷೆಯನ್ನು ಆರಂಭಿಸಲಾಗಿದೆ.

ಇದನ್ನೂ ಓದಿ : “ಜಾಗತಿಕ ಗಾಜಾ ರಕ್ಷಣೆಯ ನೌಕಾಪಡೆ”ಗೆ ಬೆಂಬಲ : ‘ಶೀತಲ ಸಮರ ಬೇಡ’

‘ಪ್ರವಾಸದ ಮಾದರಿಗಳು ಹಾಗೂ ಪ್ರಯಾಣಿಕರ ವೆಚ್ಚದ ಕುರಿತು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಸಮೀಕ್ಷೆಯು ಸಹಾಯ ಮಾಡುತ್ತದೆ’ ಎಂದು ಮಾಹಿತಿ, ಪ್ರಚಾರ ಮತ್ತು ಪ್ರವಾಸೋದ್ಯಮ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಪೋರ್ಟ್‌ ಬ್ಲೇರ್‌ನಲ್ಲಿರುವ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯ ಕ್ಷೇತ್ರ ಕಾರ್ಯಾಚರಣೆ ವಿಭಾಗದೊಂದಿಗೆ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯವೂ ಸಮೀಕ್ಷೆಯಲ್ಲಿ ಭಾಗಿಯಾಗಲಿದೆ. ಸಮೀಕ್ಷೆಯು ಜೂನ್‌ 2026ರವರೆಗೆ ಮುಂದುವರಿಯಲಿದೆ.

2024ರಲ್ಲಿ ಅಂಡಮಾನ್‌ನ ದೇಶಿಯ ಪ್ರವಾಸಿಗರ ಸಂಖ್ಯೆಯಲ್ಲಿ ಶೇ 120ರಷ್ಟು ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಶೇ 27ರಷ್ಟು ಹೆಚ್ಚಳವಾಗಿದೆ. ವಿಶ್ವ ದರ್ಜೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಯೋಜನೆ  ಪ್ರವಾಸ, ಪ್ರವಾಸಿಗರ ಕುರಿತು ಮಾಹಿತಿ ಕಲೆ ಹಾಕಲು ಸಮೀಕ್ಷೆ.

ಇದನ್ನೂ ನೋಡಿ: ಪರಿಷ್ಕೃತ ಜಿಎಸ್ ಟಿ : ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ? Janashakthi Media

Donate Janashakthi Media

Leave a Reply

Your email address will not be published. Required fields are marked *