ಮಂಗಳೂರು: ನಗರದರ ರೆಸಾರ್ಟ್’ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘೋರ ಘಟನೆಯೊಂದು ನಡೆದಿದ್ದೂ, ಮೃತಪಟ್ಟಿರುವ ವ್ಯಕ್ತಿಯನ್ನು ಮಡಿಕೇರಿ ಕುಶಾಲನಗರದ ಮೂಲದ ಪ್ರವಾಸಿ ನಿಶಾಂತ್ ಎಂದು ಗುರುತಿಸಲಾಗಿದೆ. ಮಂಗಳೂರು
ನಿಶಾಂತ್ ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಮಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಸ್ವಿಮ್ಮಿಂಗ್ ಫೂಲ್ ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಸ್ನೇಹಿತನ ಜೊತೆ ಫೋಟೋ ಶೂಟ್‌ಗೆ ತೆರಳಿ ಕಾಲು ಜಾರಿ ಕಟ್ಟೆಗೆ ಬಿದ್ದು ಯುವಕ ಸಾವು
ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಾಗಲೇ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ನೋಡಿ: ಸದನದಲ್ಲಿ ‘ಹನಿ ಟ್ರ್ಯಾಪ್’ ಸದ್ದು! – ಮೀನಾಕ್ಷಿ ಬಾಳಿ, ಕೆ.ಎಸ್. ವಿಮಲಾ ಮಾತುಕತೆ Janashakthi Media