ಬೆಂಗಳೂರು: ಜಿ.ಬಿ.ಎ ವತಿಯಿಂದ ನಗರದ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮರಾಜ ರಸ್ತೆಯ ನಾಲಾ ಕ್ರಾಸ್ ಬಳಿ ಹಳೆಯ ಕಲ್ಲಿನ ಕಲ್ವರ್ಟ್ ಕಟ್ಟಡವನ್ನು ತೆರವುಗೊಳಿಸಿ, ಹೊಸದಾಗಿ ಆರ್.ಸಿ.ಸಿ ಕಲ್ವರ್ಟ್ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ
ವಾಹನ ಸಂಚಾರ ನಿರ್ಬಂಧಿಸಲಾದ ರಸ್ತೆಗಳು:
ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದಿಂದ ನಾಲಾ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಶ್ರೀನೇಟ್, ಖೇರಾ ಹೆಸರುಗಳು ಚರ್ಚೆಯಲ್ಲಿ
ಕಾಮರಾಜ ರಸ್ತೆಯ ಕೆ.ಆರ್ ರಸ್ತೆ – ಕಬ್ಬನ್ ರಸ್ತೆ ಜಂಕ್ಷನ್ನಿಂದ ಡಿಕ್ಕನ್ಸನ್ ಜಂಕ್ಷನ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಸಂಚಾರಕ್ಕೆ ಪರ್ಯಾಯ ಮಾರ್ಗಗಳು:
ಕಮರ್ಷಿಯಲ್ ಸ್ಟ್ರೀಟ್ ಕಡೆಯಿಂದ ಬರುವವರಿಗೆ: ಕಮರ್ಷಿಯಲ್ ಸ್ಟ್ರೀಟ್ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ವಾಹನಗಳು, ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದ ಹತ್ತಿರ ಬಲ ತಿರುವು ಪಡೆದು ವೀರಾಪಿಳ್ಳೆ ಸ್ಟ್ರೀಟ್ ಮೂಲಕ ನಾಗಮ್ಮ ದೇವಸ್ಥಾನದ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಹೋಗಬಹುದು.
ಡಿಕ್ಕನ್ಸನ್ ರಸ್ತೆ ಕಡೆಯಿಂದ ಬರುವವರಿಗೆ: ಡಿಕ್ಕನ್ಸನ್ ರಸ್ತೆ (ಅಲೀಸ್ ಜಂಕ್ಷನ್) ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಡಿಕ್ಕನ್ಸನ್ ರಸ್ತೆಯ ಮೂಲಕ ನೇರವಾಗಿ ಚಲಿಸಿ ಬ್ಲೂ-ಸ್ಟೋನ್ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
ಮನವಿ:
ಈ ಅವಧಿಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ನೋಡಿ: ಯುವಜನರನ್ನು “ಕಾಕ್ರೋಚ್” ಎಂದವರ ವಿರುದ್ಧ ಡಿಜಿಟಲ್ ಚಳವಳಿ! – ಕಾಕ್ರೋಚ್ ಜನತಾ ಪಾರ್ಟಿ Janashakthi Media
