ಆಟೋ ಚಾಲಕನ ಮೇಲೆ ಹಲ್ಲೆ:‌ ಸಂಚಾರಿ ಪೊಲೀಸ್, ಸಿಬ್ಬಂದಿ ಅಮಾನತು

 ಪುತ್ತೂರು: ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ನಡೆದಿದ್ದೂ, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

ಈ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ಬಂದಿದ್ದು, ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದನ್ನೂ ಓದಿ: ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಅದರಂತೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕ್ರಮ ಕೈಗೊಂಡಿರುತ್ತಾರೆ.

ಇದನ್ನೂ ನೋಡಿ: ಸೌಜನ್ಯ ಹುಟ್ಟಿದ ದಿನ ಇಂದು | ಸೌಜನ್ಯಳಿಗೆ ನ್ಯಾಯ ಸಿಗಬೇಕಿದೆ Janashakthi Media

Donate Janashakthi Media

Leave a Reply

Your email address will not be published. Required fields are marked *