‘ನೀಟ್’ ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಟ್ರೈನರ್

Please follow and like us:
ತಮಿಳುನಾಡು: ತಿರುನಲ್ವೇಲಿಯಲ್ಲಿ ತಮಿಳುನಾಡು ‘ನೀಟ್’ ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಕೋಲಿನಿಂದ ಹೊಡೆದಿರುವ ಘಟನೆ ನಡೆದಿದೆ. ಕೋಚಿಂಗ್ ಸೆಂಟರ್ ಟ್ರೈನರ್ ಹಾಗೂ ಮಾಲೀಕನ ಹುಚ್ಚಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೋಲಿನಿಂದ ವಿದ್ಯಾರ್ಥಿಗಳಿಗೆ ಸಿಕ್ಕಾಪಟ್ಟೆ ಹೊಡೆಯಲಾಗಿದೆ.

ವಿದ್ಯಾರ್ಥಿಗಳನ್ನ‌ ಯಾವುದೋ ಕ್ಷುಲ್ಲಕ ಕಾರಣಕ್ಕೆ ಹೊಡೆಯಲಾಗಿದ್ದು, ಸರತಿ ಸಾಲಿನಲ್ಲಿ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಅಲ್ಲದೆ ಹುಡುಗಿಯರ ಮೇಲೆ ಚಪ್ಪಲಿ ಎಸೆದು ಕೋಚಿಂಗ್ ಸೆಂಟರ್ ಮಾಲೀಕ ಅಸಭ್ಯವಾಗಿ ವರ್ತಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸ್ಥಳ ಆಯ್ಕೆಗಾಗಿ ಸಭೆ

ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಪ್ರಕರಣವನ್ನು ಸ್ಥಳೀಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ನೋಡಿ: ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *