ರಾಜ್ಯದಲ್ಲಿ 13 ಲಕ್ಷ ಬಿಪಿಎಲ್ ಕಾರ್ಡ್‌ ಎಪಿಎಲ್‍ಗೆ ವರ್ಗಾವಣೆ: ಕೆ.ಎಚ್. ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ರೇಷನ್ ಕಾರ್ಡುಗಳು ಅನರ್ಹವಾಗಿವೆ ಎಂದು ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್‌ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್‌ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: SIR | 58 ಲಕ್ಷ ಮತದಾರರ ರದ್ದು : ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿ ಪ್ರಕಟ

3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ.

ಈಗಾಗಲೇ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇದರಿಂದ ಒಟ್ಟು 3,000 ರೂ.ಕೋಟಿಗಳೊಂದಿಗೆ 2.57 ಲಕ್ಷ ರೈತರಿಗೆ ಈ ಯೋಜನೆಯು ಪ್ರಯೋಜನ ವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ನೋಡಿ: ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? ಭಯ ಬಿಡಿ ಸತ್ಯ ತಿಳಿಯಿರಿ Janashakthi Media

Donate Janashakthi Media

Leave a Reply

Your email address will not be published. Required fields are marked *