ಬೆಂಗಳೂರು: ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದವರಿಗೂ ಬಿ ರಿಪೋರ್ಟ್ ನೀಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಸ್ವತಃ ನ್ಯಾಯಮೂರ್ತಿಗಳು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಹಾಗೂ ಭ್ರಷ್ಟಾಚಾರ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್, ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆ. ಜನರ ಒಳಿತಿಗಾಗಿ ವರ್ಗಾವಣೆಗೂ ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.
ಎಸಿಬಿ ಕಲೆಕ್ಷನ್ ಸೆಂಟರ್ ಅಂದಿದ್ದಕ್ಕೆ ವರ್ಗಾವಣೆ ಬೆದರಿಕೆ
ಈ ಬೆದರಿಕೆಗೆ ನಾನು ಬಗ್ಗಲ್ಲ – ಜಸ್ಟೀಸ್ ಎಚ್.ಪಿ. ಸಂದೇಶ್ pic.twitter.com/SYfOSkGvQZ— Janashakthi Media (@janashakthikw) July 5, 2022
ಎಸಿಬಿ ಎಡಿಜಿಪಿ ತುಂಬಾ ಪವರ್ ಫುಲ್ ಆಗಿದ್ದಾರಂತೆ. ವ್ಯಕ್ತಿಯೋರ್ವರು ನನ್ನ ಸಹ ನ್ಯಾಯಮೂರ್ತಿಗೆ ಹೇಳಿದ್ದಾರೆ. ಇದನ್ನು ಸಹ ನ್ಯಾಯಮೂರ್ತಿಯೊಬ್ಬರು ನನಗೆ ತಿಳಿಸಿದ್ದಾರೆ. ವರ್ಗಾವಣೆ ಮಾಡಿಸುವ ಬೆದರಿಕೆಯನ್ನೂ ಆದೇಶದಲ್ಲಿ ಬರೆಸುತ್ತೇನೆ. ನನಗೆ ಯಾರ ಹೆದರಿಕೆಯಿಲ್ಲ. ಜಡ್ಜ್ ಆದ ಮೇಲೆ ಒಂದಿಂಚೂ ಆಸ್ತಿ ಮಾಡಿಲ್ಲ. ಜಡ್ಜ್ ಹುದ್ದೆ ಹೋದರೂ ಚಿಂತೆಯಿಲ್ಲ. ನಾನು ರೈತನ ಮಗ, ಭೂಮಿ ಉಳುಮೆ ಮಾಡಲೂ ಸಿದ್ಧನಿದ್ದೇನೆ. ಯಾವ ರಾಜಕೀಯ ಪಕ್ಷಕ್ಕೂ ಸೇರಿದವನು ನಾನಲ್ಲ ಎಂದು ಗುಡುಗಿದ್ದಾರೆ.
ಎಸಿಬಿ ಅಧಿಕಾರಿಗಳು ಸಾರ್ವಜನಿಕರನ್ನು ರಕ್ಷಿಸುತ್ತಿದ್ದೀರಾ ಅಥವಾ ಕಳಂಕಿತರನ್ನು ರಕ್ಷಿಸುತ್ತಿದ್ದೀರಾ? ಎಸಿಬಿ ಎಡಿಜಿಪಿ ಸರ್ವಿಸ್ ರೆಕಾರ್ಡ್ನ್ನು ಇಲ್ಲಿವರೆಗೆ ಹಾಜರುಪಡಿಸಿಲ್ಲ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆ ಹಾಕುವ ಹಂತಕ್ಕೆ ತಲುಪಿದ್ದೀರಿ. ಭ್ರಷ್ಟಾಚಾರದಲ್ಲಿ ರಾಜ್ಯವೇ ಹೊತ್ತಿ ಉರಿಯುತ್ತಿದೆ. ಎಸಿಬಿ ಅಧಿಕಾರಿಗಳಾಗಿ ಏನು ಮಾಡುತ್ತಿದ್ದೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ