ವೇತನ ಹಿಂಬಾಕಿಗೆ ಒತ್ತಾಯಿಸಿ ಜ. 29ರಂದು ಸಾರಿಗೆ ನೌಕರರು ಪ್ರತಿಭಟನೆ

ಬೆಂಗಳೂರು:  ಸಾರಿಗೆ ನೌಕರರು ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿ ಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಂಟಿ ಕ್ರಿಯಾ ಸಮಿತಿ ಪತ್ರ ಬರೆದಿದೆ.

ಕಳೆದ 38 ತಿಂಗಳಿನಿಂದ ವೇತನ ಹಿಂಬಾಕಿ ಬಂದಿಲ್ಲ. ಈ ಬಗ್ಗೆ ಹಲವು ಬಾರಿ ನಾವು ಮನವಿ ಮಾಡಿದರೂ ಅದಕ್ಕೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟದ ಹಾದಿ ಹಿಡಿಯಬೇಕಿದೆ ಎಂದು ಕ್ರಿಯಾಸಮಿತಿ ಅಧ್ಯಕ್ಷ ಅನಂತಸುಬ್ಬರಾವ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಚಿನ್ನಸ್ವಾಮಿ ಮೈದಾನಕ್ಕೆ ಎ.ಐ.ಕ್ಯಾಮೆರಾ ಅಳವಡಿಕೆಗೆ ಪ್ರಸ್ತಾವ ಸಲ್ಲಿಸಿದ ಆರ್‌ಸಿಬಿ

ಪ್ರತಿಭಟನೆಯಲ್ಲಿ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈಗಾಗಲೇ ಇನ್ನು ಆರು ತಿಂಗಳ ಕಾಲ ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಪ್ರಸ್ತುತ ಸಾರಿಗೆ ನೌಕರರು ಪ್ರತಿಭಟನೆ ಸಂಬಂಧ ಸರ್ಕಾರ ಯಾ ಕ್ರಮ ಕೈಗೊಳ್ಳುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.

ಬೆಂಗಳೂರು, ಜ.18- ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂಪಾಕ್‌ರನಲ್ಲಿ ಪ್ರತಿ ಭಟನೆ ನಡೆಸಲು ನಿರ್ಧರಿಸಲಾಗಿದ್ದು,
ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಂಟಿ ಕ್ರಿಯಾ ಸಮಿತಿ ಪತ್ರ ಬರೆದಿದೆ.

ಇದನ್ನೂ ನೋಡಿ: ರಾಗಿ ಕಣದಲ್ಲಿ ಸಂಕ್ರಾಂತಿ ಸುಗ್ಗಿ ಸೊಬಗು Janashakthi Media

Donate Janashakthi Media

Leave a Reply

Your email address will not be published. Required fields are marked *