ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರ್ಕಾರ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅದರ ಹೊರತಾಗಿಯೂ ಪಟ್ಟು ಬಿಡದ ಸಾರಿಗೆ ನೌಕರರು ಆಗಸ್ಟ್ 5 ಬೆಳಗ್ಗೆಯಿಂದಲೇ ಮುಷ್ಕರವನ್ನು ಆರಂಭಿಸಿದೆ.
ಸಾರಿಗೆ ನೌಕರರ ಮುಷ್ಕರದ ಪರಿಣಾಮ ರಾಜ್ಯಾದ್ಯಂತ ಬಸ್ಸುಗಳ ಸೇವೆ ವ್ಯತ್ಯಯವಾಗಿ ಹಲವಾರು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಸದ್ಯ ಜನರು ಖಾಸಗಿ ಬಸ್ಗಳ ಮೊರೆ ಹೋಗಿದ್ದಾರೆ.
ಇದನ್ನೂ ಓದಿ: ಒಳ ಮೀಸಲಾತಿ | 1766 ಪುಟ, 6 ಶಿಫಾರಸ್ಸುಳ್ಳ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ
ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿದೆ, ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ನಾಲ್ಕೂ ನಿಗಮಗಳಲ್ಲಿ ಸುಮಾರು 1,700 ಎಲೆಕ್ನಿಕ್ ಬಸ್ಗಳು ಸೇವೆ ನೀಡುತ್ತಿವೆ. ಅದರಲ್ಲಿ ಬಿಎಂಟಿಸಿ ಒಂದರಲ್ಲೇ 1,500 ಎಲೆಕ್ನಿಕ್ ಬಸ್ಗಳು ಸಂಚರಿಸುತ್ತಿವೆ.
ಆ ಬಸ್ ಗಳಲ್ಲಿ ಖಾಸಗಿ ಚಾಲಕರನ್ನು ನಿಯೋಜಿಸಲಾಗಿದೆ. ಆ ಚಾಲಕರು ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಆದ್ದರಿಂದ ಎಲೆಕ್ಟಿಕ್ ಬಸ್ಗಳು ಮುಷ್ಕರದ ಸಂದರ್ಭದಲ್ಲಿ ಸೇವೆ ನೀಡಲಿವೆ.
ಇದನ್ನೂ ನೋಡಿ: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ! ಹೂತಿಟ್ಟ ಸತ್ಯ ಹೊರ ಬರಲಿ!! Janashakthi Media
