ಬೇಡಿಕೆ ಈಡೇರಿಸದಿದ್ದರೆ ಹೋರಾಟ; ಸಾರಿಗೆ ನೌಕರರ ಪಾದಯಾತ್ರೆ ಘೋಷಣೆ

ಬೆಂಗಳೂರು: ಸರಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆಗಳು ಹಾಗೂ ಇನ್ನಿತರೆ ಹಕ್ಕೊತ್ತಾಯಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಎ.8 ರಂದು ಚಿತ್ರದುರ್ಗದಿಂದ ರಾಜಧಾನಿಗೆ ಪಾದಯಾತ್ರೆ ನಡೆಸಿ, ಎ.21ರಿಂದ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಏಪ್ರಿಲ್‌ 6ರಂದು ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ. ಬೇಡಿಕೆ
ನಗರದ ಪ್ರೆಸ್ ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನುಡಿದಂತೆ ನಡೆಯುವ ಸರಕಾರ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು 3 ವರ್ಷಗಳಾದರೂ ಇದುವರೆಗೂ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದರು.

ಇದನ್ನೂ ಓದಿ: ಎಲ್ಲಾ ತರಗತಿಗಳಿಗೆ ಕಾನೂನು ಶಿಕ್ಷಣ ವಿಸ್ತರಣೆ; ಸುಪ್ರೀಂ ಕೋರ್ಟ್ ಸಲಹೆ

ಸಾರಿಗೆ ಸಚಿವರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಭೆಗಳು ನಡೆದಿವೆ ಹೊರತು, ಸಮಸ್ಯೆಗಳನ್ನು ಈಡೇರಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ಬೇಸರದ ಸಂಗತಿ. ಇದರಿಂದ ಸಾರಿಗೆ ನೌಕರರು ತಮ್ಮ ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾದ್ಯವಾಗದೆ, ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕೂಡಲೇ ಸರಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರಕಾರಿ ನೌಕರರಂತೆ 7ನೇ ವೇತನ ಆಯೋಗದ ಮಾದರಿಯಲ್ಲಿ ಸಮಾನ ವೇತನವನ್ನು 2024ರ ಜ.1 ರಿಂದ ಅನ್ವಯವಾಗುವಂತೆ ನೀಡಬೇಕು. 2020ರ ಜ.1 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಸದರಿ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು. ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ನಡೆಸಬೇಕು ಎಂದು ಚಂದ್ರಶೇಖರ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸುರೇಶ್, ರಾಧಾಕೃಷ್ಣ, ತಿಪ್ಪೇಸ್ವಾಮಿ, ಎಸ್.ನಾಗರಾಜು ಉಪಸ್ಥಿತರಿದ್ದರು.

ಇದನ್ನೂ ನೋಡಿ: ಕರ್ನಾಟಕದ ಮತದಾರರ ಪಟ್ಟಿ ಪರಿಶೀಲನೆ – ಮ್ಯಾಪಿಂಗ್ ಆಗದ ಮತದಾರರು ಎಷ್ಟು? Janashakthi Media

Donate Janashakthi Media

Leave a Reply

Your email address will not be published. Required fields are marked *