ಪ್ರತಾಪ್‌ಗಢ್(ರಾಜಸ್ಥಾನ): ಜಿಲ್ಲೆಯ ಧರಿಯಾವಾಡ್‌ನ ಹಳ್ಳಿಯೊಂದರಲ್ಲಿ 21 ವರ್ಷದ ಗರ್ಭಿಣಿ ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ. ಪ್ರಕರಣದಲ್ಲಿ ಮಹಿಳೆಯ ಪತಿ ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆಯ ವಿಡಿಯೊ ಹರಿದಾಡಿದ್ದು, ವಿವಿಧ ರಾಜಕೀಯ ಮುಖಂಡರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆತ್ತಲೆ ಮೆರವಣಿಗೆ
ಎಫ್‌ಐಆರ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಥಳಿಸಿರುವುದು ಹಾಗೂ ಇತರ ಅಪರಾಧಕ್ಕಾಗಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ಜನರನ್ನು ಹೆಸರಿಸಲಾಗಿದೆ ಎಂದು ಡಿಜಿಪಿ ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಪ್ರಮುಖ ಆರೋಪಿಗಳು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬೆತ್ತಲೆ ಮೆರವಣಿಗೆ
ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಯುದ್ಧ ನಡೆದರೆ ಭಾರತದ ಮುಸ್ಲಿಮರು ಪಾಕ್ ಪರ’ ಎಂದು ಅಸಾದುದ್ದೀನ್ ಒವೈಸಿ ಹೇಳಿಲ್ಲ
ಸಂತ್ರಸ್ತೆ ಯುವತಿಯು ತನ್ನ ಪತಿ ಕನ್ಹಾ ಗಮೆಟಿ, ಸೂರಜ್, ಬೇನಿಯಾ, ನೇತಿಯಾ, ನಾಥು ಮತ್ತು ಮಹೇಂದ್ರ ವಿರುದ್ಧ ದೂರು ದಾಖಲಿಸಿದ್ದು, ಇವರೆಲ್ಲರೂ ತನ್ನನ್ನು ಬಲವಂತವಾಗಿ ಮೋಟಾರು ಸೈಕಲ್‌ನಲ್ಲಿ ಕರೆದೊಯ್ದು ಬೆತ್ತಲೆ ಮೆರವಣಿಗೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
“ಪ್ರಮುಖ ಆರೋಪಿಗಳಾದ ಕನ್ಹಾ, ನೆತಿಯಾ, ಬೆನಿಯಾ, ಪಿಂಟು ಹಾಗೂ ಅಪ್ರಾಪ್ತ ವಯಸ್ಕನೊಬ್ಬನನ್ನು ಬಂಧಿಸಲಾಗಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಪುನಿಯಾ, ಖೇತಿಯಾ ಮತ್ತು ಮೋತಿಲಾಲ್ ಅವರನ್ನು ಇನ್ನಷ್ಟೆ ಬಂಧಿಸಬೇಕಿದೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಕನ್ಹಾ, ನೇತಿಯಾ ಮತ್ತು ಬೆನಿಯಾ ಅವರು ಓಡಿಹೋಗಲು ಪ್ರಯತ್ನಿಸುತ್ತಿರುವಾಗ ಗಾಯಗೊಂಡಿದ್ದು, ಪ್ರತಾಪ್‌ಗಢ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಹಿಳೆಯು ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಧರಿಯಾವಾಡ ಎಸ್‌ಎಚ್‌ಒ ಪೇಶಾವರ್ ಖಾನ್ ಹೇಳಿದ್ದಾರೆ. ಮಹಿಳೆ ಬೇರೊಬ್ಬ ಪುರುಷನೊಂದಿಗೆ ನೆಲೆಸಿದ್ದರಿಂದ ಆಕೆಯ ಅತ್ತೆಯಂದಿರು ಸಿಟ್ಟಾಗಿದ್ದರು. ಘಟನೆ ಗುರುವಾರ ನಡೆದಿದ್ದು, ಮಹಿಳೆಯ ಸಂಬಂಧಿಕರು ಆಕೆಯನ್ನು ಅಪಹರಿಸಿ ತಮ್ಮ ಗ್ರಾಮಕ್ಕೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆತ್ತಲೆ ಮೆರವಣಿಗೆ
ಇದನ್ನೂ ಓದಿ: ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಸೆ.11ಕ್ಕೆ ಬೆಂಗಳೂರು ಸಾರಿಗೆ ಬಂದ್
ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ ಮತ್ತು ಪ್ರತಾಪಗಢ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿರ್ದೇಶನದ ಮೇರೆಗೆ ಡಿಜಿಪಿ ಮಿಶ್ರಾ ಅವರು ಶುಕ್ರವಾರ ರಾತ್ರಿ ಎಡಿಜಿ (ಅಪರಾಧ) ದಿನೇಶ್ ಎಂಎನ್ ಅವರನ್ನು ಪ್ರತಾಪಗಢಕ್ಕೆ ಕಳುಹಿಸಿದ್ದಾರೆ.
ಮುಖ್ಯಮಂತ್ರಿ ಗೆಹ್ಲೋಟ್ ಅವರು ಘಟನೆಯ ಖಂಡಿಸಿದ್ದು, “ಇಂತಹ ಘಟನೆಗಳಿಗೆ ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅವರು ಹೇಳೀದ್ದಾರೆ.
“ಜನರ ಮುಂದೆಯೆ ಗರ್ಭಿಣಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಆಡಳಿತಕ್ಕೆ ಇದರ ಅರಿವಿಲ್ಲ. ಈ ಘಟನೆಯು ರಾಜಸ್ಥಾನಕ್ಕೆ ನಾಚಿಕೆಗೇಡಿನ ವಿಷಯವಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಹೇಳಿದ್ದು, ವೀಡಿಯೊವನ್ನು ಹಂಚಿಕೊಳ್ಳದಂತೆ ಜನರಿಗೆ ಮನವಿ ಮಾಡಿದ್ದಾರೆ.
ವಿಡಿಯೊ ನೋಡಿ: ಮುಂದಿನ ಕೆಲವು ವರ್ಷಗಳಲ್ಲಿ ಭಾರತ ಐದನೇ ಆರ್ಥಿಕ ದೇಶವಾಗುತ್ತದೆಯೇ?Janashakthi Media