ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್ : ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಡೋನಾಲ್ಡ್ ಟ್ರಂಪ್ ಇದೀಗ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಮೆರಿಕ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ।ಜಾನ್‌ ರಾಬರ್ಟ್ಸ್, ನೂತನ ಅಧ್ಯಕ್ಷ ಟ್ರಂಪ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ. 40 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಪ್ರಮಾಣವಚನ ಸ್ವೀಕಾರ ಸಮಾರಂಭ ಕ್ಯಾಪಿಟಲ್‌ ರೊಟುಂಡಾ ಒಳಾಂಗಣ ಸಭಾಂಗಣದಲ್ಲಿ ನಡೆದಿದೆ.

ಡೋನಾಲ್ಡ್ ಟ್ರಂಪ್ 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ಅಮೆರಿಕವನ್ನುದ್ದೇಶಿ ಮೊದಲ ಭಾಷಣ ಮಾಡಿದ ಟ್ರಂಪ್, ಇದು ಅಮೆರಿಕದ ಸ್ವರ್ಣ ಯುಗ ಎಂದು ಬಣ್ಣಿಸಿದ್ದಾರೆ. ಹಲವು ಸವಾಲುಗಳು ನಮ್ಮ ಮುಂದಿದೆ. ಆದರೆ ಯುನೈಟೆಡ್ ಸ್ಟೇಟ್ಸ್ ಸಮರ್ಥವಾಗಿದೆ. ಹೀಗಾಗಿ ಇದು ಸುವರ್ಣಯುಗದ ಆರಂಭ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕ ನೂತನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭಕ್ಕೆ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಲ್ಗೊಂಡಿದ್ದಾರೆ. ಪ್ರಧಾನಿ ಮೋದಿ ನೀಡಿದ ಸಂದೇಶವನ್ನು ಡೋನಾಲ್ಡ್ ಟ್ರಂಪ್‌ಗೆ ತಲುಪಿಸಿದ್ದಾರೆ.

ಇನ್ನು ಟ್ರಂಪ್ ಪ್ರಮಾಣವಚನ ಸಮಾರಂಭಕ್ಕೆ ಟ್ರಂಪ್‌ ಆಪ್ತ, ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್, ಖ್ಯಾತ ಉದ್ಯಮಿ ಜೆಫ್ ಬೆಜೋಸ್ ಮತ್ತು ಫೇಸ್‌ಬುಕ್‌ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌, ಚೀನಾ ಸಾಮಾಜಿಕ ಮಾಧ್ಯಮ ದೈತ್ಯ ಟಿಕ್‌ಟಾಕ್‌ ಮುಖ್ಯಸ್ಥ ಶೌ ಚೆವ್, ಮಾಜಿ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್ ಮತ್ತು ಬರಾಕ್ ಒಬಾಮಾ, ಬಿಲ್‌ ಕ್ಲಿಂಟನ್‌ ಪತ್ನಿ ಹಿಲರಿ ಕ್ಲಿಂಟನ್‌, ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್‌, ನಿರ್ಗಮಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಪಾಲ್ಗೊಂಡಿದ್ದರು.

Donate Janashakthi Media

Leave a Reply

Your email address will not be published. Required fields are marked *