ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಧಾರುಣ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಸರಣಿ ಅಪಘಾತದಲ್ಲಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮೃತರನ್ನು ವಿಜಯಪುರ ಮೂಲದ ಚಂದ್ರಯಾಗಪ್ಪ ಗೌಳ್ (48), ಗೌರಾಬಾಯಿ (42), ವಿಜಯಲಕ್ಷ್ಮಿ (36), ಜಾನ್ (16), ದೀಕ್ಷಾ (12) ಆರ್ಯಾ (6) ಎಂದು ಗುರುತಿಸಲಾಗಿದೆ. ಚಂದ್ರಯಾಗಪ್ಪ ಗೌಳ IAST ಸಾಫ್ಟ್ವೇರ್ ಸಲ್ಯೂಷನ್ಸ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಬೆಂಗಳೂರಿನಲ್ಲಿ ಐಟಿ ಉದ್ಯಮಿಯಾಗಿರುವ ಚಂದ್ರಯಾಗಪ್ಪ ಅವರು 300 ಜನರಿಗೆ ಉದ್ಯೋಗ ನೀಡಿದ್ದಾರೆ. ಎರಡು ತಿಂಗಳ ಹಿಂದೆ ವೋಲ್ವೋ ಕಾರು ಖರೀದಿ ಮಾಡಿದ್ದ ಅವರು ವೀಕೇಂಡ್ ಪ್ರವಾಸಕ್ಕೆ ಹೊರಟಿದ್ದರು ಎನ್ನಲಾಗಿದೆ.
ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರೊಳಗಿದ್ದ ಎಲ್ಲಾ ಪ್ರಯಾಣಿಕರ ದೇಹಗಳು ಛಿದ್ರಛಿದ್ರವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ.