ಆಪರೇಷನ್ ಸಿಂಧೂರ್ ನಿಯಮ ಉಲ್ಲಂಘಿಸಿದ ತುಂಗಭದ್ರಾ ಅಣೆಕಟ್ಟಿನ ಕಾರ್ಯನಿರ್ವಾಹಕ ಇಂಜಿನಿಯರ್

ಕೊಪ್ಪಳ: ಪ್ರವಾಸಿಗರಿಗೆ ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಹಿನ್ನೆಲೆ ದೇಶದ ಕೆಲವು ಪ್ರದೇಶಗಳಿಗೆ ಹೋಗದಂತೆ ನಿರ್ಬಂಧ ಹೇರಲಾಗಿತ್ತು. ಹಾಗೆಯೇ ಮೇ 8ರಿಂದ ರಾಜ್ಯದಲ್ಲಿಯೂ ಪ್ರಮುಖ ಅಣೆಕಟ್ಟು, ದೇವಾಲಯಗಳು, ಹಲವು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ನಿಯಮ

ಆದರೂ ಮೇ 10ರಂದು ತುಂಗಭದ್ರಾ ಅಣೆಕಟ್ಟಿನ ಕಾರ್ಯನಿರ್ವಾಹಕ ಇಂಜಿನಿಯರ್ ನಿಯಮ ಉಲ್ಲಂಘಿಟಿಸಿ ಅಣೆಕಟ್ಟು ಆವರಣದಲ್ಲಿ ತಮ್ಮ ಮಗನ ನಿಶಿತಾರ್ಥ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಿನ್ನೆಲೆ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ, ತುಂಗಭದ್ರಾ ಅಣೆಕಟ್ಟಿನ ಕಾರ್ಯನಿರ್ವಾಹಕ ಇಂಜಿನಿಯರ್ ತಮ್ಮ ಮಗನ ನಿಶ್ಚಿತಾರ್ಥ ಸಮಾರಂಭವನ್ನು ಮೇ 10 ರಂದು ಜಲಾಶಯದ ಆವರಣದಲ್ಲಿ ಆಯೋಜನೆ ಮಾಡಿದ್ದರು. ಈ ಮೂಲಕ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಘಟನೆ ಇದೀಗ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರು| ನಗರದಲ್ಲಿ ರಾತ್ರಿಯಿಡೀ ಸುರಿದ ಮಳೆ; ರಸ್ತೆಗಳಲ್ಲಿ ನೀರು

ಹಿರಿಯ ಅಧಿಕಾರಿ ಗಿರೀಶ್ ಮೇಟಿ ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿದ್ದರು. ಆದರೆ, ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಿಂದಾಗಿ ಮೇ 8ರಿಂದ ಅಣೆಕಟ್ಟುಗಳು ಮತ್ತು ದೇವಾಲಯಗಳು ಸೇರಿದಂತೆ ಹಲವು ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

ಮೇ 10ರಂದು ನಿಶ್ಚಿತಾರ್ಥ ನಡೆದಿದ್ದು, ಈ ವೇಳೆ ಶಾಮಿಯಾನ ಹಾಕಿಸಿ ಜನರಿಗೆ ಹೋಳಿಗೆ ಊಟ ಹಾಕಿಸಿರುವುದಾಗಿ ತಿಳಿದುಬಂದಿದೆ. ಜೊತೆಗೆ ತುಂಗಭದ್ರ ಜಲಾಶಯ ಹಿಂಭಾಗಕ್ಕೆ ಹೋಗದಂತೆ ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿತ್ತು. ಆದರೂ ಚೆಕ್‌ಪೋಸ್ಟ್ ಮೂಲಕ ಜನರು ಹಾದು ಹೋಗಿರುವುದು ತಿಳಿದುಬಂದಿದೆ.

ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಹಿರಿಯ ಅಧಿಕಾರಿ ಗಿರೀಶ್ ಮೇಟಿ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯಗಳು ಕೇಳಿಬಂದಿವೆ. ಈ ನಿಶ್ಚಿತಾರ್ಥ ಸಮಾರಂಭವನ್ನು ಸ್ಥಳೀಯ ಜನರು ನೋಡಿದ್ದು, ಜಾರಿಯಲ್ಲಿದ್ದ ನಿಯಮಗಳು ಸ್ಪಷ್ಟವಾಗಿ ಉಲ್ಲಂಘನೆಯಾಗಿದೆ ಅಂತಲೂ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ಗಿರೀಶ್‌ ಮೇಟಿ ಅವರಿಗೆ ಅನೇಕ ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅಣೆಕಟ್ಟು ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಅದರ ಬಗ್ಗೆ ವಿವರವಾಗಿ ಪರಿಶೀಲನೆ ಮಾಡುತ್ತೇವೆ. ಯಾವುದೇ ಅಧಿಕಾರಿ ತಪ್ಪು ಮಾಡಿದ್ದರೆ, ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತುಂಗಭದ್ರ ಜಲಾಶಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ನೋಡಿ: ಮುಸ್ಲಿಮರ ಒಪ್ಪಿಗೆ ಇಲ್ಲದ ಕಾನೂನುಗಳು ಮುಸ್ಲಿಂ ಪರ ಆಗುವುದಿಲ್ಲ – ಬಿ.ಎಂ. ಹನೀಫ್ Janashakthi Media

Donate Janashakthi Media

Leave a Reply

Your email address will not be published. Required fields are marked *