ಉತ್ತರಾಖಂಡ :ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಅವಶೇಷಗಳ ಅಡಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಕರ್ತರು ರವಿವಾರ ಕೂಡ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾರ್ಮಿಕರು ಕಳೆದ 170 ಗಂಟೆಗಳಿಂದ ಸುರಂಗದ ಒಳಗೆ ಸಿಲುಕಿರುವುದರಿಂದ ಅವರ ಆರೋಗ್ಯದ ಕುರಿತು ಆತಂಕ ವ್ಯಕ್ತವಾಗಿದೆ.
#WATCH | Uttarakhand: Uttarkashi tunnel rescue | Morning visuals from the spot; relief and rescue work halted at Silkyara Tunnel
Speaking to ANI Anshu Manish Khulko, Director of the tunnel-making company NHIDCL, said that at present the drilling work in the tunnel has stopped.… pic.twitter.com/ZhNAsdAtRX
— ANI (@ANI) November 18, 2023
ಕುಸಿದ ಸುರಂಗದ ಒಳಗೆ ಸಿಲುಕಿರುವ ಕಾರ್ಮಿಕರು ಇರುವ ಸ್ಥಳವನ್ನು ತಲುಪಲು ಮೇಲಿನಿಂದ ಲಂಬ ರಂಧ್ರ ಕೊರೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಅತ್ಯಧಿಕ ಕಾರ್ಯಕ್ಷಮತೆಯ ಕೊರೆಯುವ ಯಂತ್ರ ಮಧ್ಯಪ್ರದೇಶದ ಇಂದೋರ್ನಿಂದ ಇಲ್ಲಿಗೆ ತಲುಪಿದ ಬಳಿಕ ಶನಿವಾರ ಸಂಜೆ ಲಂಬ ರಂಧ್ರ ಕೊರೆಯಲು ಸಿದ್ಧತೆ ಆರಂಭವಾಗಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರವಿವಾರ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಹಾಗೂ ರಕ್ಷಣೆ, ಪರಿಹಾರ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ”ನಾವು ಎಲ್ಲಾ ರೀತಿಯಿಂದಲೂ ಕಾರ್ಯ ನಿರ್ವಹಿಸುತ್ತಿದ್ದೇವೆ. ಇಲ್ಲಿ ಎಲ್ಲಾ ರೀತಿಯ ತಜ್ಞರ ತಂಡ ಕಾರ್ಯ ನಿರ್ವಹಿಸುತ್ತಿದೆ” ಧಾಮಿ ತಿಳಿಸಿದ್ದಾರೆ.
ನವೆಂಬರ್ 12 ರಂದು ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದ ಪರಿಣಾಮ ಸ್ಥಳದಲ್ಲಿದ್ದ 41 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡು ಇಂದಿಗೆ ಎಂಟು ದಿನಗಳೇ ಕಳೆದಿವೆ. ಕಾರ್ಮಿಕರನ್ನು ಸ್ಥಳಾಂತರಿಸಲು ನಡೆಯುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಹಲವು ಅಡೆತಡೆಗಳು ಉಂಟಾಗುತ್ತಿವೆ. ಭೂಕುಸಿತ ಸಹ ಸಂಭವಿಸಿದ್ದು, ಇದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.