ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರನ್ನು ಇಂದು ಮಂಗಳವಾರ ರಕ್ಷಿಸಲಾಇದೆ. 17 ದಿನಗಳ ಕಾಲ ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರಿಗಾಗಿ ದೇಶಾದ್ಯಂತ ಪ್ರಾರ್ಥಿಸಿದ್ದರು. ಈಗ ಪ್ರಾರ್ಥನೆ ಫಲ ಕೊಟ್ಟಿದೆ. ಕಠಿಣ ಕಾರ್ಯಾಚರಣೆಯ ನಂತರ ಎಲ್ಲಾ ಕಾರ್ಮಿಕರನ್ನು ರಕ್ಷಿಸಿ ಸ್ಥಳಾಂತರಿಸಿದ್ದಾರೆ. ಉತ್ತರಾಖಂಡದ
ಸುಮಾರು 50 ಮೀಟರ್ಗೂ ಅಧಿಕ ದೂರದಲ್ಲಿ ಸುರಂಗದ ಒಳಗಡೆ ಸಿಲುಕಿದ್ದ ಎಲ್ಲ 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಪೈಪ್ ಮೂಲಕ ಗಾಲಿ ಸ್ಟ್ರೆಚರ್ ಸಹಾಯದಿಂದ ರಕ್ಷಣಾ ತಂಡಗಳು ಹೊರಗೆಳೆದು ರಕ್ಷಣೆ ಮಾಡಿದವು. ಹೊರಗೆ ಬಂದರ ಕಾರ್ಮಿಕರಿಗೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ಅಡಿಯಲ್ಲಿ ದೇಹ ಪರೀಕ್ಷೆ ಮಾಡಿ ತಕ್ಷಣ ಆಂಬ್ಯುಲೆನ್ಸ್ಗಳ ಸಹಾಯದಿಂದ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಎಲ್ಲ ಕಾರ್ಮಿಕರು ಆರೋಗ್ಯಯುತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಸುರಂಗ ಕುಸಿತ: ಅಂತಿಮ ಹಂತ ತಲುಪಿದ ರಕ್ಷಣಾ ಕಾರ್ಯಾಚರಣೆ
ಸ್ಥಳಾಂತರಿಸುವ ಮೊದಲು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ನ ಸಿಬ್ಬಂದಿ ಸ್ಟ್ರೆಚರ್‌ಗಳೊಂದಿಗೆ ಸುರಂಗವನ್ನು ಪ್ರವೇಶಿಸಿದ್ದರು. ಕಾರ್ಮಿಕರನ್ನು ಸ್ವಾಗತಿಸಲು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ವಿಕೆ ಸಿಂಗ್ ಉಪಸ್ಥಿತರಿದ್ದರು.
ಸುರಂಗದಿಂದ ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸುತ್ತಿದ್ದಂತೆ ಸ್ಥಳೀಯರು ಸಿಲ್ಕ್ಯಾರಾ ಸುರಂಗದ ಹೊರಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಸುರಂಗದ ಒಂದು ಭಾಗವು ನವೆಂಬರ್ 12 ರಂದು ಕುಸಿದಿದೆ, ಸುರಂಗದ ಸಿಲ್ಕ್ಯಾರಾ ಭಾಗದಲ್ಲಿ 60 ಮೀಟರ್ ವಿಸ್ತಾರದಲ್ಲಿ ಅವಶೇಷಗಳು ಬೀಳುತ್ತಿತ್ತು, ಇದರಿಂದಾಗಿ 41 ಕಾರ್ಮಿಕರು ನಿರ್ಮಾಣ ಹಂತದಲ್ಲಿರುವ ಸುರಂಗದೊಳಗೆ ಸಿಕ್ಕಿಹಾಕಿಕೊಂಡಿದ್ದರು. ಉತ್ತರಾಖಂಡದ
ಗಡ್ಕರಿ ಅಭಿನಂದನೆ:
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಏಜೆನ್ಸಿಗಳಿಗೆ ಧನ್ಯವಾದ ತಿಳಿಸಿದ್ದಾರೆ. “ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಿರುವುದರಿಂದ ನನಗೆ ಸಂಪೂರ್ಣ ಸಮಾಧಾನ ಮತ್ತು ಸಂತೋಷವಾಗಿದೆ. ಇದು ಬಹು ಏಜೆನ್ಸಿಗಳ ಸುಸಂಘಟಿತ ಪ್ರಯತ್ನವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಮಹತ್ವದ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದರೂ ವಿವಿಧ ಇಲಾಖೆಗಳು ಮತ್ತು ಏಜೆನ್ಸಿಗಳು ಪರಸ್ಪರ ಪೂರಕವಾಗಿವೆ. ಎಲ್ಲರ ದಣಿವರಿಯದ ಮತ್ತು ಪ್ರಾಮಾಣಿಕ ಪ್ರಯತ್ನಗಳು, ಎಲ್ಲರ ಪ್ರಾರ್ಥನೆಯೊಂದಿಗೆ ಸೇರಿಕೊಂಡು ಈ ಕಾರ್ಯಾಚರಣೆಯನ್ನು ಸಾಧ್ಯವಾಗಿಸಿದೆ. ರಕ್ಷಣಾ ತಂಡಗಳ ಸಮರ್ಪಿತ ಪ್ರಯತ್ನಗಳು ಅನುಕೂಲಕರ ಫಲಿತಾಂಶಗಳನ್ನು ನೀಡಿವೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿ ಅಭಿನಂದನೆ:
ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ನಾನು ಹೇಳಲು ಬಯಸುತ್ತೇನೆ. ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಪ್ರಶಂಸಿಸಲೇ ಬೇಕು. ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಮಾನವೀಯತೆ ಮತ್ತು ತಂಡದ ಕೆಲಸಗಳ ಅದ್ಭುತ ಉದಾಹರಣೆಯನ್ನು ಹೊಂದಿದ್ದಾರೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡದ
ವಿಡಿಯೋ ನೋಡಿ: ನೇಜಾರು ಹತ್ಯೆ ಪ್ರಕರಣ :ಕೊಲೆಗಾರನ ಹಿನ್ನೆಲೆ ತನಿಖೆಯಾಗಲಿ, ಕೋಮುವಾದದ ವಾಸನೆಯೂ ಬಡಿಯುತ್ತಿದೆ Nejaru murder case