ತುರ್ತು ವೈದ್ಯಕೀಯ ಸೇವೆಗೆ ಅಡ್ಡಿ ಆರೋಪ: ರೈತ ಪ್ರತಿಭಟನೆ ವಿರುದ್ಧ ಸುಪ್ರೀಂಗೆ ಅರ್ಜಿ!


– ಸಕಾಲದಲ್ಲಿ ವೈದ್ಯಕೀಯ ನೆರವು ಸಿಗದೇ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಆರೋಪ

ಹೊಸದಿಲ್ಲಿ: ಕೇಂದ್ರದ ಕೃಷಿ ಕಾನೂನುಗಳ ಜಾರಿ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಂದಾಗಿ, ದೆಹಲಿಗೆ ತುರ್ತು ವೈದ್ಯಕೀಯ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವೈದ್ಯಕೀಯ ಸೇವೆಗೆ ಅಡ್ಡಿಪಡಿಸುತ್ತಿರುವ ಪ್ರತಿಭಟನಾ ನಿರತ ರೈತರನ್ನು ದೆಹಲಿ ಗಡಿಯಿಂದ ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

ದೆಹಲಿ ಗಡಿ ಬಳಿ ಬೀಡು ಬಿಟ್ಟಿರುವ ರೈತರು, ತುರ್ತು ವೈದ್ಯಕೀಯ ಸೇವೆಗಳಿಗೆ ಅಡ್ಡಿಯನ್ನುಂಟು ಮಾಡುತ್ತಿದ್ದಾರೆ, ಇದರಿಂದ ಸಕಾಲದಲ್ಲಿ ವೈದ್ಯಕೀಯ ನೆರವು ಸಿಗದೇ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಅರ್ಜಿದಾರ ಪರ ವಕೀಲ ಓಂ ಪ್ರಕಾಶ್ ಪರಿಹಾರ್, ಈ ಕೂಡಲೇ ದೆಹಲಿ ಗಡಿಯಿಂದ ರೈತರನ್ನು ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಆಗ್ರಹಿಸಿದ್ದಾರೆ.

ತುರ್ತು ವೈದ್ಯಕೀಯ ಸೇವಾ ವಾಹನಗಳನ್ನು ದೆಹಲಿಯೊಳಗೆ ಬಿಡಲಾಗುತ್ತಿಲ್ಲ. ಮಾನವೀಯ ದೃಷ್ಟಿಯಿಂದ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಸುಪ್ರೀಂಕೋರ್ಟ್‌ಗೆ ಅಹವಾಲು ಸಲ್ಲಿಸಿದ್ದಾರೆ.
ನಾಳೆ(ಡಿ.05-ಶನಿವಾರ) ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದ್ದು, ದೆಹಲಿ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ರೈತರು ಬೀಡು ಬಿಟ್ಟಿದ್ದಾರೆ.

ಇದರಿಂದಾಗಿ ದೆಹಲಿ ಗಡಿಯಲ್ಲಿ ಟ್ರಾಫಿಕ್ ಸಮಸ್ಯೆ ತಲೆದೂರಿರುವದಲ್ಲದೇ, ರೈತರು ತುರ್ತು ವೈದ್ಯಕೀಯ ಸೇವೆಗಳಿಗೂ ದಾರಿ ಮಾಡಿಕೊಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

Donate Janashakthi Media

Leave a Reply

Your email address will not be published. Required fields are marked *