ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ – 10 ಲಕ್ಷ ರೂ ಮೌಲ್ಯದ ಒಡವೆ ವಶ

ಹಾವೇರಿ :ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡು ಮತ್ತೆ ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಮನೆಗಳ್ಳತನದ 15 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಕಳ್ಳರನ್ನು ದಾವಣಗೆರೆ ಜಿಲ್ಲೆಯ ಹದಡಿ ಠಾಣಾ ಪೊಲೀಸರು ಅರೋಪಿಗಳನ್ನು ಬಂಧಿಸಿ, ಅವರಿಂದ 10 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

ರಾಣೆಬೆನ್ನೂರಿನ ಸೆಂಟ್ರಿಂಗ್ ಕೆಲಸ ಮಾಡುವ ಮುಬಾರಕ್ (22) ಮತ್ತು ಟೈಲ್ಸ್ ಕೆಲಸ ಮಾಡುವ ಸಾದತ್ ಅಲಿಯಾಸ್ ಸುಳ್ಳ ಸಾಧತ್ (32) ಬಂಧಿತರು. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುವಾಡ ಗ್ರಾಮದ ಶಿಕ್ಷಕ ಮಧು ಬಿ.ಟಿ ಅವರು ತಮ್ಮ ಮನೆ ಕಳ್ಳತನವಾದ ಬಗ್ಗೆ ಹದಡಿ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ :-ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸಲು ಸಮಿತಿ ರಚನೆ: ಕೆ.ಎಚ್.ಮುನಿಯಪ್ಪ

ಆರೋಪಿತರ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ್, ಮಂಜುನಾಥ್ ನೇತೃತ್ವದಲ್ಲಿ ಹದಡಿ ಪೊಲೀಸ್ ಠಾಣೆ ಪೊಲೀಸ್ ತಂಡವು ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಒಟ್ಟು 5 ಪ್ರಕರಣಗಳಿಗೆ ಸಂಬಂಧಿಸಿದ ಸ್ವತ್ತನ್ನು ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹದಡಿ ಪೊಲೀಸ್ ಠಾಣೆಯ 02 ಪ್ರಕರಣಗಳು, ಬಸವಾಪಟ್ಟಣ ಪೊಲೀಸ್ ಠಾಣೆಯ 02 ಪ್ರಕರಣಗಳಲ್ಲಿ ಒಟ್ಟು 7.20 ಲಕ್ಷ ರೂ. ಬೆಲೆಯ 91.00 ಗ್ರಾಂ ತೂಕದ ಬಂಗಾರದ ಆಭರಣಗಳು, 4000 ರೂ ಬೆಲೆಯ 50 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು 58,000 ರೂ ನಗದು ಮತ್ತು ಚಿತ್ರದುರ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾದ 1.50 ಲಕ್ಷ ರೂ ಮೌಲ್ಯದ ಬುಲೆಟ್ ಬೈಕ್, ಕಳವು ಮಾಡಿ ಆರೋಪಿಗಳೇ ಬಳಸುತ್ತಿದ್ದ 1 ಲಕ್ಷ ಮೌಲ್ಯದ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ರಾಣಿಬೆನ್ನೂರು, ದಾವಣಗೆರೆಯ ಕೆ.ಟಿ.ಜೆ ನಗರ, ಚಿತ್ರದುರ್ಗದ ಹೊಳಲ್ಕೆರೆ, ಭರಮಸಾಗರ, ಹಾವೇರಿಯ ಗುತ್ತಲ, ಬ್ಯಾಡಗಿ, ಹಾವೇರಿ ಶಹರ ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಜಿಲ್ಲೆಯ ಅನೇಕ ಪೊಲೀಸ್ ಠಾಣೆಗಳಲ್ಲಿ ಸುಮಾರು 15 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿತರು ಭಾಗಿಯಾಗಿದ್ದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತವೆ. ಆರೋಪಿತರು ಕಳೆದ 05 ತಿಂಗಳ ಹಿಂದೆ ಹಾವೇರಿ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.

Donate Janashakthi Media

Leave a Reply

Your email address will not be published. Required fields are marked *