ರಾಜ್ಯದಲ್ಲಿ ಎರಡು ದಿನ ಬಾರೀ ಮಳೆ, ಚಳಿ ಸಾದ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಚಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಳಿಯ ಜೊತೆ ಮಳೆಯೂ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯತ್ತಿದೆ. ದೇಶದ ದಕ್ಷಿಣ ಭಾಗದ ಹಲವು ರಾಜ್ಯಗಳಲ್ಲಿ ಅಬ್ಬರದ ಮಳೆಯಾಗುತ್ತಲೇ ಇದ್ದು, ಇದರಿಂದ ಈ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ಕರ್ನಾಟಕದಲ್ಲಿ ಅಂತಹ ವಾತಾವರಣ ಏನು ಇಲ್ಲ. ಆದರೂ ರಾಜ್ಯದ ಈ ಭಾಗಗಳಲ್ಲಿ ಇನ್ನು ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ನಿನ್ನೆ ಪೂರ ಚಳಿಯ ವಾತಾವರಣ ಇತ್ತು. ಮೋಡ ಕವಿದಿತ್ತು. ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ತಿಂಗಳು ಚಳಿ ಜತೆ ಮಳೆ ಸಹ ಬರಲಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಚಳಿ ಹೆಚ್ಚಿರಲಿದೆಯಂತೆ.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಹಾಸನ, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆಯದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *