ಕೋಲಾರ: ನಗರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಶವ ಬಾವಿಯೊಂದರಲ್ಲಿ ಪತ್ತೆಯಾಗಿದ್ದ ಪ್ರಕರಣ ಸಂಭಂದ, ಪೊಲೀಸರ ತನಿಖೆಯಲ್ಲಿ ಬಾಲಕರಿಯ ಸಾವಿನ ರಹಸ್ಯ ಬಯಲಾಗಿದೆ. ಬಾಲಕಿಯರಿಬ್ಬರೂ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ಇದ್ದಕ್ಕಿದ್ದಂತೆ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಧನ್ಯಾ ಬಾಯಿ (13) ಹಾಗೂ ಚೈತ್ರಾಬಾಯಿ (13 )ಎಂಬ ಬಾಲಕಿಯರು ಅ.2ರಂದು ಕಾಣೆಯಾಗಿದ್ದರು. ಅವರ ಶವ ಸಮೀಪದ ಬಾವಿಯಲ್ಲಿ ಎರಡು ದಿನಗಳ ಬಳಿಕ ಪತ್ತೆಯಾಗಿತ್ತು.
ಇದನ್ನೂ ಓದಿ: 7 ಎಕರೆಗೂ ಹೆಚ್ಚು ಜಮೀನು ಇದ್ದವರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಲು ಅನರ್ಹ
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯರಿಬ್ಬರೂ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ಖಚಿತವಾಗಿದೆ. ಡೆತ್ ನೋಟ್ ನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಇಬ್ಬರೂ ಬಾಲಕಿಯರು ಬರೆದಿಟ್ಟಿದ್ದಾರೆ.
ಇದನ್ನೂ ನೋಡಿ: ಧರ್ಮಸ್ಥಳ | ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ಧರ್ಮಾಧಿಕಾರಿಯ ಮೇಲಿದೆ – ಎಸ್ ಜಿ ಸಿದ್ದರಾಮಯ್ಯ Janashakthi
