ಬೆಂಗಳೂರು : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣವನ್ನು ಬೇಧಿಸಿದ್ದ ಲೋಕಾಯುಕ್ತ ಸಂಸ್ಥೆಯ ಇಬ್ಬರು ತನಿಖಾಧಿಕಾರಿಗಳನ್ನು ಏಕಾಏಕಿ ಬದಲಾಯಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಲೋಕಾಯುಕ್ತ ಡಿವೈಎಸ್ಪಿ ಪ್ರಮೋದ್ ಕುಮಾರ್ ಹಾಗೂ ಇನ್‍ಸ್ಪೆಕ್ಟರ್ ಕುಮಾರಸ್ವಾಮಿ ಅವರುಗಳನ್ನು ದಿಢೀರನೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಿವೈಎಸ್ಪಿ ಆಂಥೋನಿ ಜಾನ್ ಹಾಗೂ ಇನ್ಸ್‍ಪೆಕ್ಟರ್ ಬಾಲಾಜಿ ಬಾಬು ನೇಮಕಗೊಂಡಿದ್ದಾರೆ.
40ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಗೂ ಮನೆಯಲ್ಲಿ 8 ಕೋಟಿ ರೂ. ಅಧಿಕ ಹಣ ಸಿಕ್ಕಿದ್ದರ ಕುರಿತು ಲೋಕಾಯುಕ್ತ ತನಿಖೆ ಚುರುಕುಗೊಂಡಿದೆ. ಆದರೆ ಇದರ ಮಧ್ಯೆ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಪ್ರಮೋದ್‍ಕುಮಾರ್, ಇನ್ಸ್‍ಪೆಕ್ಟರ್ ಕುಮಾರಸ್ವಾಮಿಯವರನ್ನು ಬದಲಾವಣೆ ಮಾಡಲಾಗಿದ್ದುಇವರ ಬದಲಿಗೆ ಡಿವೈಎಸ್ಪಿ ಆಂಥೋನಿ ಜಾನ್, ಇನ್ಸ್‍ಪೆಕ್ಟರ್ ಬಾಲಾಜಿ ಬಾಬು ಅವರನ್ನು ನೇಮಕ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿ ಬದಲಾವಣೆ ಸಾಕಷ್ಟು ಅನುಮಾನ ಮೂಡಿಸಿದೆ.
ಇದನ್ನೂ ಓದಿ : ಎ-1 ಆರೋಪಿಯಾಗಿರುವ ಮಾಡಾಳು ವಿರೂಪಾಕ್ಷಪ್ಪನಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಶಾಸಕನ ಪುತ್ರ ಮಾಡಾಳ್ ಪ್ರಶಾಂತ್ ಈಗಾಗಲೇ ಜೈಲಿನಲ್ಲಿದ್ದಾರೆ. ಆದರೆ ಎ1 ಆರೋಪಿ ಶಾಸಕ ವಿರೂಪಾಕ್ಷಪ್ಪ ಮಾತ್ರ ಇನ್ನೂ ಭೂಗತರಾಗಿದ್ದಾರೆ. ಮಾಡಾಳ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು ಎಲ್ಲಿದ್ದಾರೆ ಎನ್ನುವ ಸುಳಿವೇ ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಅಧಿಕಾರಿ ಗಳು. ಪುತ್ರನ ಲಂಚ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕೆಎಸ್‍ಡಿಎಲ್‍ನ ಮಾಜಿ ಅಧ್ಯಕ್ಷ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಕಳೆದ ಆರು ದಿನಗಳಿಂದ ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿರೂಪಾಕ್ಷಪ್ಪ ಬಂಧನಕ್ಕೆ ಲೋಕಾಯುಕ್ತ ಮೂರು ವಿಶೇಷ ತಂಡಗಳನ್ನು ರಚಿಸಿದೆ. ಇನ್ನು ಈ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿಗಳ ಬದಲಾವಣೆಯಾಗಿದೆ. ಕೇವಲ 4 ದಿನಕ್ಕೆ ಪ್ರಕರಣದ ಇಬ್ಬರು ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಕರಣದ ಹಿನ್ನೆಲೆ: ಚನ್ನಗಿರಿ ಕ್ಷೇತ್ರ ಶಾಸಕರೂ ಆಗಿರುವ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್‍ಡಿಎಲ್‍ನ ಅಧ್ಯಕ್ಷರಾಗಿದ್ದಾರೆ. ಇದಕ್ಕೆ ರಾಸಾಯನಿಕಗಳ ಪೂರೈಕೆಗಾಗಿ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು 80 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರ ಮುಂದುವರಿದ ಭಾಗವಾಗಿ 40 ಲಕ್ಷ ರೂ.ಗಳನ್ನು ಮಾಡಾಳ್ ಪ್ರಶಾಂತ್ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚದ ರೂಪದಲ್ಲಿ ಸ್ವೀಕರಿಸುತ್ತಿದ್ದ ಹಣ ವಶಕ್ಕೆ ಪಡೆದು, ಪ್ರಶಾಂತ್ ಅವರನ್ನು ಬಂಧಿಸಿದ್ದರು.