ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಬೈಕ್ ಗೆ ಹೊಡೆದ ಪರಿಣಾಮ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕಲಾಪದ ವೇಳೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ನ್ಯಾಯಮೂರ್ತಿ ವಿ. ಶ್ರೀಶಾನಂದ
ಬೈಕ್ ಸವಾರ ವೆಂಕಟೇಶ್ (29) ಹಾಗೂ ಮೋಕ್ಷಿತಾ (8) ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾವಣ್ಣ ಹಾಗೂ ನರಸಮ್ಮ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.
ಇದನ್ನೂ ನೋಡಿ: ಸವಿತಕ್ಕ ಜೊತೆ ಸಂಕ್ರಾಂತಿ ಸುಗ್ಗಿ ಹಾಡು, ಒಂದಿಷ್ಟು ಮಾತುJanashakthi Media