ಮಡಿಕೇರಿ: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇವೊಂದರಲ್ಲಿ ಅಮೆರಿಕದ ಮಹಿಳೆಯೊಬ್ಬರಿಗೆೆ ಮಾದಕ ದ್ರವ್ಯ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಾದಕ
ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕನ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಮತ್ತು ಹೋಂಸ್ಟೇ ಮಾಲೀಕರಿಬ್ಬರನ್ನೂ ಸ್ಥಳೀಯ ನ್ಯಾಯಾಲಯವು ಮೇ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ: ಯಾದಗಿರಿ| ಸರ್ಕಾರಿ ಹಾಸ್ಟೆಲ್ನಲ್ಲಿ ಅಕ್ರಮ ಖಾಸಗಿ ಕೋಚಿಂಗ್ ಸೆಂಟರ್!
ಭಾರತಕ್ಕೆ ಭೇಟಿ ನೀಡಿದ್ದ ವಾಷಿಂಗ್ಟನ್ ಮೂಲದ ಮಹಿಳೆ ಕುಟ್ಟಾ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದರು.ಹೋಂಸ್ಟೇ ಮಾಲೀಕರು ಸಂತ್ರಸ್ತೆಯ ವೈೈ ಸಂಪರ್ಕವನ್ನು ಮೂರು ದಿನಗಳವರೆಗೆ ಕಡಿತಗೊಳಿಸಿದ್ದರು, ಇದರಿಂದಾಗಿ ಅವರು ಯಾರನ್ನೂ ಸಂಪರ್ಕಿಸಲು ಅಥವಾ ಸಹಾಯ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತನಗೆ ಮಾದಕ ವಸ್ತು ಬೆರೆಸಿದ ಪಾನೀಯವನ್ನು ನೀಡಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ವೆಸಗಲಾಗಿದೆ. ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.ಸಂತ್ರಸ್ತ ಮಹಿಳೆಯ ದೂರು ಮತ್ತು ಪೂರಕ ಸಾಕ್ಷ್ಯಗಳ ಆಧಾರದ ಮೇಲೆ, ನಾವು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆ ಸಹಾಯ ಪಡೆಯುವುದನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಹೋಂಸ್ಟೇ ಮಾಲೀಕರ ವಿರುದ್ಧವೂ ತನಿಖೆ ನಡೆಸಲಾಗುತ್ತಿದೆ.
ಹೋಂಸ್ಟೇ ಮಾಲೀಕರ ವಿರುದ್ಧ ಆರೋಪಗಳು ಕೇಳಿಬಂದಿದ್ದು, ಪ್ರಕರಣವು ಗಂಭೀರ ತಿರುವು ಪಡೆದುಕೊಂಡಿದೆ. ಮೂರು ದಿನಗಳ ನಂತರ ಸಂತ್ರಸ್ತೆ ಹೋಂಸ್ಟೇಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾಳೆ.
ತಾನು ಮೈಸೂರಿಗೆ ಹೋಗುತ್ತಿರುವುದಾಗಿ ಮಾಲೀಕರಿಗೆ ತಿಳಿಸಿದ್ದಾರೆ. ನಂತರ, ಅವರು ಯುನೈಟೆಡ್ ಸ್ಟೇಟ್‌್ಸನ ಅಧಿಕಾರಿಗಳನ್ನು ಸಂಪರ್ಕಿಸಿದ ನಂತರ ಅಮೆರಿಕದ ಅಧಿಕಾರಿಗಳು ಇಮೇಲ್ ಮೂಲಕ ಭಾರತೀಯ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳ ಸಂವಹನದ ಮೇರೆಗೆ ನಾವು ಔಪಚಾರಿಕ ಕ್ರಮಗಳನ್ನು ಪ್ರಾರಂಭಿಸಿದ್ದೇವೆ. ಪ್ರಕರಣವನ್ನು ತಕ್ಷಣವೇ ದಾಖಲಿಸಲಾಯಿತು ಮತ್ತು ತನಿಖಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸರೊಂದಿಗೆ ಸಂಪರ್ಕದಲ್ಲಿರುವ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು , ದೆಹಲಿ ಮತ್ತು ಚೆನ್ನೈ ಅಧಿಕಾರಿಗಳು ಪೊಲೀಸರನ್ನು ಸಂಪರ್ಕಿಸಿದ್ದಾರೆ.ವಿಧಿವಿಜ್ಞಾನ ಪರೀಕ್ಷೆ ಮತ್ತು ಡಿಜಿಟಲ್ ಸಾಕ್ಷ್ಯಗಳ ಸಂಗ್ರಹ ಸೇರಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ. ನಾವು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸುತ್ತಿದ್ದೇವೆ. ಸಂಭವನೀಯ ತೊಡಕು ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಮಡಿಕೇರಿ,ಏ.22- ಜಿಲ್ಲೆಯ ಹೋಂಸ್ಟೇವೊಂದರಲ್ಲಿ ಅಮೆರಿಕದ ಮಹಿಳೆಯೊಬ್ಬರಿಗೆೆ ಮಾದಕ ದ್ರವ್ಯ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ನೋಡಿ: ಬಗೆದಷ್ಟೂ..ಮುಗಿಯದ SIR ಬಗ್ಗಡ : ದೇಶದ ಜನರನ್ನೇ ಪರದೇಶಿಗಳನ್ನಾಗಿಸುತ್ತಿದೆ Janashakthi Media
