ಕೇರಳ ಎರಡು ಅಸಹಜ ಸಾವು : ನಿಫಾ ವೈರಸ್‌ ಶಂಕೆ

ತಿರುವನಂತಪುರ: ಕೇರಳ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಎರಡು ಅಸಹಜ ಸಾವು ಪ್ರಕರಣ ದಾಖಲಾದ ಬೆನ್ನಲ್ಲೇ ನಿಫಾ ವೈರಸ್‌ ಸೋಂಕಿನ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಸಾವು

ಇದರ ಬೆನ್ನಲ್ಲೇ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಮಂಗಳವಾರ ಸೆ-12 ವರದಿಯಾಗಿದೆ.

ಇದನ್ನೂ ಓದಿ:ಕೋವಿಡ್‌ ಸೋಂಕು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಿ : ರಾಜ್ಯಗಳಿಗೆ ಕೇಂದ್ರ ಸೂಚನೆ

ಜ್ವರದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ವ್ಯಕ್ತಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೃತರಲ್ಲಿ ಒಬ್ಬರ ಸಂಬಂಧಿಕನನ್ನು ಕೇರಳ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಭಾರತದಲ್ಲಿ ಮೊದಲ ನಿಫಾ ವೈರಸ್ ಸೋಂಕಿತ ಪ್ರಕರಣ 2018ರ ಮೇ 19 ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿತ್ತು. 2018ರ ಜೂನ್ 1 ರವರೆಗೆ ಕೇರಳ ರಾಜ್ಯದಲ್ಲಿ 17 ಸಾವುಗಳು ಮತ್ತು 18 ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದವು.

2021ರಲ್ಲಿ 12 ವರ್ಷದ ಬಾಲಕನೊಬ್ಬ ನಿಫಾ ವೈರಸ್‌ಗೆ ಬಲಿಯಾಗಿದ್ದನು. ಸೋಂಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು, ರಕ್ತ ಹಾಗೂ ನೇರ ಸಂಪರ್ಕದಿಂದ ನಿಫಾ ವೈರಸ್ ಹರಡುತ್ತದೆ.

 

Donate Janashakthi Media

Leave a Reply

Your email address will not be published. Required fields are marked *