ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲಾದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ ಈ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ನಿರ್ಬಂಧವನ್ನು ವಿಧಿಸುವ ಸಾಧ್ಯತೆಗಳಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಈಗಾಗಲೇ ವಾಹನಗಳ ಚಾಲಕರಿಗೆ ಬಳಕೆಗೆ ಉಕ್ತವಾಗಿದ್ದು, ಕೇವಲ ಒಂದೂವರೆ ತಾಸಿನಲ್ಲಿ (90 ನಿಮಿಷಗಳು) ವಾಹನಗಳು ಬೆಂಗಳೂರಿನಿಂದ ಮೈಸೂರಿಗೆ ತಲುಪುತ್ತಿವೆ. ಅದೇ ರೀತಿ ಮೈಸೂರಿನಿಂದ ಬೆಂಗಳೂರಿಗೆ ಅಷ್ಟೇ ಪ್ರಮಾಣದಲ್ಲಿ ವಾಹನಗಳು ತಲುಪುತ್ತಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದಾಗಿ ಇದೀಗ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಸಂಚಾರವನ್ನು ಶೀಘ್ರದಲ್ಲೇ ನಿರ್ಬಂಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ : ಮಗು ಸೇರಿ ಮೂವರ ಸಾವು, ಇಬ್ಬರು ಗಂಭೀರ
ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಬೈಕ್ ಹಾಗೂ ಆಟೋಗಳಿಗೆ ಪ್ರವೇಶ ನೀಡದಿರುವುದು ಪ್ರಾಧಿಖಾರದ ನಿಯಮ. ದೇಶದ ಎಲ್ಲಾ ಎಕ್ಸ್ಪ್ರೆಸ್ ವೇಗಳಲ್ಲೂ ಸಹ ಈ ನಿಯಮ ಜಾರಿಯಲ್ಲಿದ್ದು, ಇದೀಗ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಗೂ ಸಹ ಅನ್ವಯವಾಗಲಿದೆ. ಇದಕ್ಕೆ ಮುಖ್ಯ ಕಾರಣ ಅಪಘಾತಗಳನ್ನು ತಪ್ಪಿಸುವುದಾಗಿದೆ. ಹೆದ್ದಾರಿಯ ಪ್ರವೇಶ ಮತ್ತು ನಿಯಂತ್ರಿತ ಭಾಗದಲ್ಲಿ ದ್ವಿಚಕ್ರ , ತ್ರಿಚಕ್ರ ವಾಹನ ಹಾಗೂ ಕೃಷಿ ವಾಹನಗಳ ಸಂಚಾರಕ್ಕೆ ಅವಕಾಶವನ್ನು ನೀಡುವುದಿಲ್ಲ ಈ ಸಂಬಂಧ ಕೇಂದ್ರ ರಸ್ತೆ ಸಾರಿಗೆ ಹಾಗೂ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಎನ್ಎಚ್ಎಐ ಮೂಲಗಳು ತಿಳಿಸಿವೆ.
ಸರ್ವೀಸ್ ರಸ್ತೆಯಲ್ಲಿ ಅವಕಾಶ :
”ಹೆದ್ದಾರಿಯನ್ನು ನಿರ್ದಿಷ್ಟ ವೇಗ, ಸುರಕ್ಷತೆ ಹಾಗೂ ಯಾವುದೇ ಅಡೆತಡೆ ಇಲ್ಲದೆ ಪ್ರಯಾಣಿಸಲು ನಿರ್ಮಾಣ ಮಾಡಲಾಗಿದೆ. ಹೀಗಾಗಿ, ಕೇಂದ್ರದ ಎಕ್ಸ್ಪ್ರೆಸ್ ವೇ ನಿಯಮಗಳು ಅನ್ವಯವಾಗಲಿವೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಪ್ರಸ್ತಾವನೆಗೆ ಅನುಮೋದನೆ ನೀಡಲಿದೆ. ಅಧಿಕೃತ ಅಧಿಸೂಚನೆ ಹೊರಬಿದ್ದ ಬಳಿಕ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ಹಾಗೂ ಕೃಷಿ ವಾಹನಗಳ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗುತ್ತದೆ. ಹೆದ್ದಾರಿಯ ಅಕ್ಕಪಕ್ಕದ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ಹಾಗೂ ಕೃಷಿ ವಾಹನಗಳು ಸಂಚರಿಸಲು ಅವಕಾಶವಿದೆ,” ಎಂದು ಮೂಲಗಳು ಹೇಳಿವೆ.