ಬೆಳೆಗಳನ್ನು ಸಂಪೂರ್ಣ ನಾಶ ಮಾಡಿದ ಎರಡು ಕಾಡಾನೆಗಳು; ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಶಿವಮೊಗ್ಗ: ಭಾನುವಾರ ಸೆಪ್ಟೆಂಬರ್ 22‌ ತಡರಾತ್ರಿ , ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ.

ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿವೆ.

ಇದನ್ನೂ ಓದಿ: ಶ್ರೀಲಂಕಾ: ಬಂಡವಾಳಶಾಹಿ ಪಕ್ಷಗಳಿಗೆ ಭಾರೀ ಹೊಡೆತ: ಎಡಪಂಥಕ್ಕೆ ತಿರುಗಿದ ಜನ

ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ. ಪುರದಾಳು ಗ್ರಾಮ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಕೇವಲ 9 ಕಿ.ಮೀ ದೂರದಲ್ಲಿದೆ.

ಇದನ್ನೂ ನೋಡಿ: ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ- ಸಾಹಿತಿ ಬರಗೂರು ರಾಮಚಂದ್ರಪ್ಪ ಕಳವಳJanashakthi Media

Donate Janashakthi Media

Leave a Reply

Your email address will not be published. Required fields are marked *