ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಕಂಪೆನಿಯ ಬ್ಲಾಸ್ಟ್ನಲ್ಲಿ ಗಾಯಗೊಂಡಿದ್ದ ಕಾರ್ಮಿರಿಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೇ.17 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯ ಎಸ್ಕೆ ಸ್ಟೀಲ್ ಕಂಪನಿಯಲ್ಲಿ ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮೂರು ಹೋಟೆಲ್ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್; ಬೆಂಗಳೂರು
ಬಿಹಾರ ಮೂಲದ ಅಶೋಕ್ ಕುಮಾರ್ (49) ಹಾಗೂ ಒಡಿಶಾ ಮೂಲದ ಮುಖೇಶ್ ಕುಮಾರ್ (33) ಮೃತಪಟ್ಟ ಕಾರ್ಮಿಕರು. ಈ ಘಟನೆಯಲ್ಲಿ ಸುಶೀಲ್ ಕುಮಾರ್ ಎಂಬ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ನೋಡಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಮೇ 30ರಂದು ಹಾಸನದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ