ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

ಬೆಂಗಳೂರು: ಮೆಜೆಸ್ಟಿಕ್ ಬಳಿಯ ಬಿನ್ನಿಮಿಲ್ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಕೇತನ್ ಮಣಿಕಂಠನ್ (23 ವರ್ಷ), ಶರತ್ ಕಣ್ಣನ್ ರವಿ (27) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಬಿನ್ನಿಪೇಟೆ ರೈಲ್ವೆ ಗೇಟ್ ಬಳಿ (ಕೆಎಸ್‌ಆರ್ ಬೆಂಗಳೂರು ಸಿಟಿ ಜಂಕ್ಷನ್‌ನಿಂದ 3 ಕಿ.ಮೀ) ಇಬ್ಬರು ಯುವಕರು ಹಳಿ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಡಾಲರ್ ಆಧಿಪತ್ಯಕ್ಕೆ ಬರುತ್ತಿವೆ ಸವಾಲುಗಳು

ಈ ಸಂಬಂಧ ರೈಲ್ವೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇತನ್ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೆ, ಶರತ್‌ ಫ್ಲಿಪ್‌ಕಾರ್ಟ್‌ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಹಳಿ ಮೇಲೆ ಯುವಕರು ವಾಕಿಂಗ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಡಿ.25 ರಾತ್ರಿ 9.20ರ ಸುಮಾರಿಗೆ ನನಗೆ ಮಾಹಿತಿ ಬಂದಿತ್ತು. ಯಾವ ರೈಲು ಡಿಕ್ಕಿ ಹೊಡೆದಿದೆ ಎಂಬುದು ತಿಳಿದುಬಂದಿಲ್ಲ ಗೇಟ್ ಮ್ಯಾನ್ ಹೇಳಿದ್ದಾರೆ. ಅಸ್ವಾಭಾವಿಕ ಸಾವಿನ ಕುರಿತು ಬಿಎನ್‌ಎಸ್‌ನ ಸೆಕ್ಷನ್ 194 ರ ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ನೋಡಿ: ಮನುವಾದಿ ಅಮಿತ್ ಶಾ ವಜಾಕ್ಕೆ ದಲಿತ ಹಕ್ಕುಗಳ ಸಮಿತಿ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *