ಮಸೀದಿ ಕೆಡವಿ ನಿರ್ಮಿಸಿದ ಮಂದಿರ ಒಪ್ಪುವುದಿಲ್ಲ – ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್

ಚೆನ್ನೈ: ಮಸೀದಿಯನ್ನು ಕೆಡವಿ ನಿರ್ಮಿಸಿದ ಮಂದಿರವನ್ನು ತಮ್ಮ ಪಕ್ಷವು ಒಪ್ಪುವುದಿಲ್ಲ ಎಂದು ಡಿಎಂಕೆ ನಾಯಕ, ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಬಾರದು ಎಂದು ಹೇಳಿದ್ದಾರೆ.

ಡಿಎಂಕೆ ಯಾವುದೇ ನಿರ್ದಿಷ್ಟ ಧರ್ಮ ಅಥವಾ ನಂಬಿಕೆಗೆ ವಿರುದ್ಧವಾಗಿಲ್ಲ ಎಂದು ತಮ್ಮ ಅಜ್ಜ ಎಂಕೆ ಕರುಣಾನಿಧಿ ಹೇಳಿದ್ದಾರೆ ಎಂದು ಉದಯನಿಧಿ ಹೇಳಿದ್ದಾರೆ. 1992 ರಲ್ಲಿ ಬಾಬರಿ ಮಸೀದಿ ಧ್ವಂಸವನ್ನು ಉಲ್ಲೇಖಿಸಿದ ಅವರು, “ಅಲ್ಲಿ ದೇವಸ್ಥಾನ ಕಟ್ಟುತ್ತಿರುವ ಬಗ್ಗೆ ಯಾವುದೆ ಸಮಸ್ಯೆ ಇಲ್ಲ. ಆದರೆ ಮಸೀದಿ ಕೆಡವಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ದೋಣಿ ದುರಂತ 12 ಮಕ್ಕಳು ಸೇರಿ 16 ಜನರ ದುರ್ಮರಣ | 18 ಜನರ ವಿರುದ್ಧ ಎಫ್‌ಐಆರ್

“ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬಾರದು ಎಂದು ನಮ್ಮ ಪಕ್ಷದ ಖಜಾಂಚಿ ಟಿ ಆರ್ ಬಾಲು ಈಗಾಗಲೇ ಹೇಳಿದ್ದಾರೆ” ಎಂದು ಉದಯನಿಧಿ ಹೇಳಿದ್ದಾರೆ.

2023ರ ಸೆಪ್ಟೆಂಬರ್‌ನಲ್ಲಿ ‘ಸನಾತನ’ವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದ ಉದಯನಿಧಿ, ಮೂಢನಂಬಿಕೆಗಳನ್ನು ಪ್ರಶ್ನಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರಿಸುವ ಅಗತ್ಯವಿದೆ ಎಂದಿದ್ದರು. ಈ ಹೇಳಿಕೆಯನ್ನು ಬಿಜೆಪಿ ಹಿಂದೂ ಧರ್ಮಕ್ಕೆ ತಗುಲಿ ಹಾಕಿ ದೇಶದಾದ್ಯಂತ ಪ್ರತಿಭಟನೆ ನಡೆಸಿತ್ತು.

“ನಾವು ಮೂಢನಂಬಿಕೆಗಳು, ಕುರುಡು ನಂಬಿಕೆಗಳನ್ನು ಪ್ರಶ್ನೆ ಮಾಡಬೇಕಾಗಿದೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರಬೇಕಾಗಿದೆ. ತಮಿಳುನಾಡಿನಲ್ಲಿ 2021 ರಲ್ಲಿ ನೋಡಿದ ಬದಲಾವಣೆಯಂತೆ, 2024 ರಲ್ಲಿ ದೆಹಲಿಯಲ್ಲಿ ಅಧಿಕಾರದ ಬದಲಾವಣೆಯನ್ನು ನಾವು ನೋಡಬೇಕಾಗಿದೆ” ಎಂದು ಅವರು ಹೇಳಿದ್ದರು. ದೇಶದಾದ್ಯಂತ ಟೀಕೆಗಳ ನಡುವೆಯೂ ಉದಯನಿಧಿ ಅವರು ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದರು.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ ಸಮಿತಿ ವಿಸರ್ಜಿಸಿ | ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಖರ್ಗೆ ಪತ್ರ

ಜನವರಿ 22 ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಒಡೆದ ಸ್ಥಳದಲ್ಲಿ ನಿರ್ಮಿಸುತ್ತಿರುವ ರಾಮ ಮಂದಿರ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಇತರ ರಾಜಕಾರಣಿಗಳು, ನಟರು ಮತ್ತು ನೂರಾರು ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಅದಾಗ್ಯೂ, ಕಾಂಗ್ರೆಸ್, ಸಿಪಿಐ(ಎಂ) ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ ಹಲವು ವಿರೋಧ ಪಕ್ಷಗಳು ಕಾರ್ಯಕ್ರಮಕ್ಕೆ ಆಹ್ವಾನವನ್ನು ತಿರಸ್ಕರಿಸಿದ್ದು, ಇದನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅದಾಗ್ಯೂ, ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜನವರಿ 22 ರಂದು ಮಸೀದಿಗಳು, ದೇವಾಲಯಗಳು, ಚರ್ಚ್‌ಗಳು ಮತ್ತು ಗುರುದ್ವಾರಗಳನ್ನು ಒಳಗೊಂಡ ರ‍್ಯಾಲಿಯನ್ನು ಮುನ್ನಡೆಸಲಿದ್ದಾರೆ.

ಹಿಂದೂ ಧರ್ಮದ ಉನ್ನತ ಆಧ್ಯಾತ್ಮಿಕ ನಾಯಕರಾದ ಶಂಕರಾಚಾರ್ಯರು ಕೂಡ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸುವ ಸಮಾರಂಭದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು “ಮುಖ್ಯ ನಿರೂಪಕ” ಆಗಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸನಾತನ ಶಾಸ್ತ್ರಗಳು ನಿರ್ದೇಶಿಸಿದ ಸಾಂಪ್ರದಾಯಿಕ ಆಚರಣೆಗಳನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ಕೆಮಿಕಲ್​ ಮಿಶ್ರಿತ ನೀರು ಹೊರಹಾಕುತ್ತಿರುವ ಯತ್ನಾಳ ಸಕ್ಕರೆ ಕಾರ್ಖಾನೆ : ಜನರ ಹೊಟ್ಟೆ ಸೇರುತ್ತಿದೆ ವಿಷಕಾರಿ ನೀರು

Donate Janashakthi Media

Leave a Reply

Your email address will not be published. Required fields are marked *