ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ 75ನೇ ಸ್ವಾತಂತ್ರೋತ್ಸವದ ಬಗೆಗಿನ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ಜವಾಹರ್ ಲಾಲ್ ನೆಹರೂ ಭಾವಚಿತ್ರ ಕೈಬಿಡಲಾಗಿದೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಅವರ ಮಾತನ್ನು ಪೂರೈಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಾಹೀರಾತಿನಲ್ಲಿ ಮಾಡಲಾದ ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡಲಾಗಿದೆ ಎಂದಿದ್ದಾರೆ.
ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ, ದೇಶ ವಿಭಜನೆಯ ಕರಾಳ ನೆನಪು ಅಂತ ಆಚರಣೆ ಮಾಡುತ್ತಿದ್ದೇವೆ. ಗಾಂಧೀಜಿಯವರ ಮಾತನ್ನು ನೆಹರು ಕೇಳಲಿಲ್ಲ, ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳದೆ, ದೇಶ ವಿಭಜನೆಗೆ ಕಾರಣವಾಗಿರುವ ನೆಹರೂರವರ ಫೋಟೋವನ್ನು ನಾವು ಹಾಕಲ್ಲ ಎಂದು ಸಮರ್ಥನೆ ನೀಡಿದರು.
ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲವೆಂದು ಸಮರ್ಥಿಸಿಕೊಂಡ ಎನ್ ರವಿಕುಮಾರ್, ಟಿಪ್ಪು ಅನೇಕ ದೇವಾಲಯಗಳನ್ನು ಧ್ವಂಸ ಮಾಡಿದಾತ, ಲಕ್ಷಾಂತರ ಜನರನ್ನು ಮತಾಂತರ ಮಾಡಿದವನು, ಮಹಿಳೆಯರ ಕಗ್ಗೊಲೆ ಮಾಡಿದವನು ಎಂದು ವಾದಿಸಿದರು.
ಇದನ್ನೂ ಓದಿ : ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿಯ ಫೋಟೋ ನಾಪತ್ತೆ : ಆಕ್ರೋಶ
ಅಮೃತ ಮಹೋತ್ಸವ ಕಾರ್ಯಕ್ರಮ ಸಿದ್ಧತೆ ಪರಿಶೀಲನೆ
ಎನ್ ರವಿಕುಮಾರ್, ನಾಳೆ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪರಿಶೀಲನೆ ನಡೆಸಿದರು. ನಾಳೆ ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಸೇರಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯವನ್ನು ಮಾಡುತ್ತೇವೆ ಎಂದರು.
ಬೂಟು ನೆಕ್ಕಿದವ್ರಿಗೆ
ವಿಧಾನಸೌಧದ ಒಳಗ ಆಶ್ಲೀಲ ವಿಡಿಯೋ ನೋಡುವವರಿಗೆ
ನರ್ಸ್ಗೆ ಮುತ್ತು ಕೊಡವ್ರಿಗೆ
40% ಕಮಿಷನ್ ತಗೋಳವ್ರಿಗೆ
ಸ್ವತಂತ್ರಕ್ಕಾಗಿ ಹೋರಾಟ ಮಾಡಿದವರ ಮೌಲ್ಯ ಹೇಗೆ ತಿಳಿಯುತ್ತದೆ