ನೇಜಾರು: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಇನ್ನೊರ್ವ ಮಹಿಳೆ ಗಂಭೀರವಾಗಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿ
ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.
ಮೂಲತಃ ಕೋಡಿಬೆಂಗ್ರೆಯ ಪ್ರಸ್ತುತ ನೇಜಾರು ನಿವಾಸಿಗಳಾದ ಹಸೀನಾ (48) ಮತ್ತು ಅವರ ಮಕ್ಕಳಾದ ಮಂಗಳೂರಿನಲ್ಲಿ ಲಾಜಿಸ್ಟಿಕ್‌ಯಾಗಿರುವ ಅಫ್ನಾನ್(23), ಮಂಗಳೂರಿನ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿರುವ ಅಯ್ನಾಝ್ (21) ಹಾಗೂ 8 ನೇ ತರಗತಿಯ ಅಸೀಮ್(12) ಕೊಲೆಯಾದವರು. ಕೊಲೆಯಾದ ಹಸೀನಾ ಅವರ ಅತ್ತೆ ಹಾಜಿರಾ (70) ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಡಿವೈಎಸ್ಪಿ ದಿನಕರ ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸುಪಾರಿ ಕಿಲ್ಲರ್ ಕೈವಾಡ ಶಂಕೆ
ಕೃತ್ಯ ನಡೆಸಿದ ಆರೋಪಿ ಮನೆಯಿಂದ ಪರಾರಿಯಾಗಿ ಸಂತೆ ಕಟ್ಟೆ ಜಂಕ್ಷನ್‌ನಿಂದ ಬಲಾಯಿ ಪಾದೆ ಅಲ್ಲಿಂದ ಉದ್ಯಾವರ ತನಕ ತೆರಳಿರುವ ದೃಶ್ಯಾವಳಿಗಳನ್ನು ಪೊಲೀಸರು ಕಲೆ ಹಾಕಿದ್ದು, ಉಡುಪಿ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿನ ಸಿಸಿ ಟಿವಿ ದೃಶ್ಯಾವಳಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೀಪಾವಳಿ ಪಟಾಕಿ ಅವಘಡ| ಬೆಂಗಳೂರಿನಾದ್ಯಂತ 20 ಮಂದಿಗೆ ಸುಟ್ಟಗಾಯ
ಹಣಕಾಸು ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಕೃತ್ಯ ಎಸಗಿದ ದುಷ್ಕರ್ಮಿ ಸುಪಾರಿ ಕಿಲ್ಲರ್ ಇರಬಹುದು ಎನ್ನುವ ಬಲವಾದ ಅನುಮಾನ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ನಾನಾ ಆಯಾಮದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನಾಲ್ವರ ಮೃತ ದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ವಿಡಿಯೋ ನೋಡಿ: ದಾಳಿಗೊಳಗಾಗಿರುವ ಪ್ಯಾಲೆಸ್ಟೈನ್ ಕುರಿತು ಇರಾನ್ ಕಲಾವಿದನ ಕೃತಿ Janashakthi Media