ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್ಗಳಿಗೆ ಆವರಿಸಿದೆ.
ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ 05.45 ಗಂಟೆಗೆ ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣಕ್ಕೆ ಬಂದು ನಿಲ್ಲಿಸಿತು. ಸುಮಾರು 07.10ಗಂಟೆಗೆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಬೆಳಗ್ಗೆ 7.35ಕ್ಕೆ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಈ ವೇಳೆ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಇದನ್ನೂ ಓದಿ:ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ
ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಸುತ್ತಮುತ್ತಲ ರೈಲುಗಳಿಗೂ ಯಾವುದೇ ಹಾನಿಯುಂಟಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿಢೀರ್ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿಕೊಂಡಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್ ರೈಲಿನಲ್ಲಿ ಪ್ರಯಾಣಿಕರು ಯಾರು ಇರಲಿಲ್ಲ.
ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ಗೊತ್ತಾಗಲಿದೆ, ಪ್ರಾಥಮಿಕ ಮಾಹಿತಿ ಪ್ರಕಾರ ತಾಂತ್ರಿಕ ದೋಷವೇ ಬೆಂಕಿ ಅನಾಹುತಕ್ಕೆ ಕಾರಣ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯಲತಾ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.