ಉದ್ಯೋಗ ಖಾತ್ರಿ ಕಾಮಗಾರಿ ವೇಳೆ ಕಾರ್ಮಿಕರ ಸಾವು

ಬೆಂಗಳೂರು: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ವೇಳೆ ಮೂವರು ಕೂಲಿ ಕಾರ್ಮಿಕರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ತಾಲೂಕಿನ ಹಲಗಾಪುರ ಕೆರೆಯಲ್ಲಿ ಕೆಲಸ ಮಾಡುತ್ತಿದ್ದ ಓಬಳಾಪುರ ಗ್ರಾಮದ ದುರುಗಪ್ಪ (38) ಕೆಲಸ ಮಾಡುವಾಗ ಸುಸ್ತಾಗಿ, ಮರದ ನೆರಳಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಇನ್ನೊಂದೆಡೆ ಬಾಚಿಗೊಂಡನಹಳ್ಳಿ ಕೆರೆಯಲ್ಲಿ ಚಿಲಗೋಡು ಗ್ರಾಮದ ತಳವಾರ ನಾಗಪ್ಪ (55) ಕೆಲಸ ಮಾಡುವ ವೇಳೆ ಕುಸಿದು ಬಿದ್ದು, ಎದೆನೋವಿನಿಂದ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಎರಡೂ ಗ್ರಾಮ ಪಂಚಾಯಿತಿಗಳ ಪಿಡಿಒಗಳಿಂದ ಎಲ್ಲ ಮಾಹಿತಿ ಪಡೆದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಇಒ ರಮೇಶ್ ಮಹಾಲಿಂಗಪುರ ತಿಳಿಸಿದ್ದಾರೆ.

ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರುದ್ರವಾಡಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಹೂಳೆತ್ತುವ ಕಾಮಗಾರಿ ವೇಳಿ ಕಾರ್ಮಿಕ‌ ಸೂರ್ಯಕಾಂತ ಕಲ್ಯಾಣಿ ಮೃತರಾಗಿದ್ದಾರೆ. ಇವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಊಟ ಮಾಡದೆ ಕೆಲಸಕ್ಕೆ ಹಾಜರಾದ ಕಾರಣ ಈ ಸಾವು ಸಂಭವಿಸಿರಬಹುದು ಎಂದು ಮೂಲಗಳು‌ತಿಳಿಸಿವೆ.

ಕೆಲಸದ ಜಾಗದಲ್ಲಿ ಆರೋಗ್ಯದ ಬಗ್ಗೆ ಗ್ರಾಮ ಪಂಚಾಯತಿಗಳು ನಿರ್ಲಕ್ಷ್ಯ ವಹಿಸುತ್ತಿರುವುದೆ ಈ ಘಟನೆಗಳಿಗೆ ಕಾರಣವಾಗಿದೆ. ಉದ್ಯೋಗ ಖಾತ್ರಿ ಕಾಮಗಾರಿ ನಡೆಯುವ ವೇಳಿ ಕನಿಷ್ಟ ಒಬ್ಬ ಆರೋಗ್ಯ ಕಾರ್ಕರ್ತೆಯನ್ನಾದರೂ ನೇಮಿಸುವ ಅಗತ್ಯ ಇದೆ. ಸಾರಿಗೆ ಸಮಸ್ಯಯೂ ಇದೆ. ಇದೆ ಸರಕಾರ ಹಾಗೂ ಆಯಾ ಜಿಲ್ಲಾಡಳಿತಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕು. ಹಾಗೂ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಜನಪರ ಸಂಘಟನೆಗಳು ಆಗ್ರಹಿಸಿವೆ.

Donate Janashakthi Media

Leave a Reply

Your email address will not be published. Required fields are marked *