ಭಾರತೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಗ್ರಹಿಸಿ ಉಕ್ರೇನಿನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ನವದೆಹಲಿ: ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಸಂದರ್ಭದಲ್ಲಿ ಎದುರಾದ ಉಕ್ರೇನ್‌-ರಷ್ಯಾ ಯುದ್ಧದ ಹಿನ್ನೆಲೆ ಉಕ್ರೇನ್‌ನಿಂದ ಭಾರತಕ್ಕೆ ಸ್ಥಳಂತಾರಗೊಂಡ ವಿದ್ಯಾರ್ಥಿಗಳಿಗೆ ಇಲ್ಲಿನ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರೆಸಲು ಕಲ್ಪಿಸದಿರುವುದನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು.

ಯುದ್ಧಪೀಡಿತ ಉಕ್ರೇನ್‍ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವೈದ್ಯ ವಿದ್ಯಾರ್ಥಿಗಳು, ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕೆಂದು ದೆಹಲಿ, ಉತ್ತರ ಪ್ರದೇಶ, ಹರ್ಯಾಣ, ಹಿಮಾಚಲ ಪ್ರದೇಶ, ಪಂಜಾಬ್‌, ಉತ್ತರಾಖಂಡ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಮೂಲದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಂತಿಮ ವರ್ಷದ 3000 ವಿದ್ಯಾರ್ಥಿಗಳು ಭಾರತದಲ್ಲಿ ತಮ್ಮ ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸಲು ಎನ್‍ಎಂಸಿ ಅವಕಾಶ ನೀಡಿದೆ. ಆದರೆ, ಉಳಿದ ವಿದ್ಯಾರ್ಥಿಗಳು ಪ್ರವೇಶ ನೀಡಬೇಕು ಎಂದು ಆಗ್ರಹಿಸಲಾಗಿದೆ. ಉಕ್ರೇನ್‌ ನಿಂದ ಅಂತಿಮ ವರ್ಷದ ವಿದ್ಯಾರ್ಥಿಗಳು ಹೊರತುಪಡಿಸಿ ಸುಮಾರು 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದಾರೆ ಮತ್ತು ದೇಶದಲ್ಲಿ ಕನಿಷ್ಠ 600 ವೈದ್ಯಕೀಯ ಕಾಲೇಜುಗಳಿರುವುದರಿಂದ ಪ್ರತಿ ಸಂಸ್ಥೆಯು ಸುಮಾರು 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ.

ಪ್ರತಿಭಟನೆಯಲ್ಲಿ ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇವರಲ್ಲಿ 35 ವಿದ್ಯಾರ್ಥಿಗಳು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಿದರು ಎಂದು ಉಕ್ರೇನ್ ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರ ಸಂಘದ ಅಧ್ಯಕ್ಷ ಆರ್ ಬಿ ಗುಪ್ತಾ ತಿಳಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *