ರಾಮನಗರ ಜ 23: ಬಿಡದಿ ಬಳಿ ಇರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ 75ನೇ ದಿನಕ್ಕೆ ಕಾಲಿಟ್ಟಿದೆ. ಆಡಳಿತ ಮಂಡಳಿಯು ತನ್ನ ಹಠದಿಂದ ಹಿಂದೆ ಸರಿಯದಿರುವುದಕ್ಕೆ ಕಾರ್ಮಿಕರು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಡಳಿತ ಮಂಡಳಿಯ ದೌರ್ಜನ್ಯದ ವಿರುದ್ಧ ಪ್ರತಿಭಟಿಸುತ್ತಿರುವ ಕಂಪನಿಯ ಕಾರ್ಮಿಕರು ಈ ಮೊದಲು ಒಂದು ದಿನದ ಪ್ರತಿಭಟನೆ ನಡೆಸಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ತಮ್ಮ ಬೇಡಿಕೆಗೆ ಹೀಡೆರಿಸಲು ಒತ್ತಾಯಿಸಿದ್ದಾರೆ. ಆದರೆ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಕೋವಿಡ್-19 ಆರಂಭದಿಂದಲೂ ಕಂಪನಿ ಕಾರ್ಮಿಕರನ್ನು ಪಶುಗಳಂತೆ ನಡೆಸಿಕೊಳ್ಳುತ್ತಿದೆ. ಕೆಲಸ ಮಾಡಲು ಅಸಾಧ್ಯವಾದ ರೀತಿಯಲ್ಲಿ ಕಾರ್ಮಿಕರ ಮೇಲೆ ಒತ್ತಡ ಹೇರಿ, ಮಾನಸಿಕವಾಗಿ, ದೈಹಿಕವಾಗಿ ಹಿಂಸಿಸಿ ದುಡಿಸಿಕೊಳ್ಳುತ್ತಿದೆ. ಆದ್ದರಿಂದ ಆಡಳಿತ ಮಂಡಳಿ ಕೋಡಲೇ ಅಘೋಷಿತ ಲಾಕ್ ಜೌಟ್ ತೆರವುಗೊಳಿಸಬೇಕು, ಯಾವುದೇ ಷರತ್ತಿಲ್ಲದೆ ಎಲ್ಲಾ ಕಾರ್ಮಿಕರನ್ನು ಕರ್ತವ್ಯಕ್ಕೆ ತೆಗೆದುಕೊಳ್ಳಬೇಕು. ಹೋರಾಟವನ್ನು ಹತ್ತಿಕ್ಕುವುದಕ್ಕಾಗಿ ಹಲವು ಕಾರ್ಮಿಕರನ್ನು ಅಮಾನತ್ತು ಮಾಡಲಾಗಿದೆ.
ಅಮಾನತ್ತನ್ನು ವಾಪಸ್ಸ ಪಡೆಯಬೇಕು ಹಾಗೂ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕು ಅಲ್ಲದೇ ಹೋರಾಟದ ಅವಧಿಯಲ್ಲಿರುವ ಕಾರ್ಮಿಕರಿಗೆ ಪೂರ್ಣ ವೇತನ ನೀಡಬೇಕೆಂದು ಎಂಬಂತೆ ಹಲವು ಬೇಡಿಕೆ ಈಡೆರಿಸಲು ಕಾರ್ಮಿಕ ಮುಖಂಡರು ಒತ್ತಾಯಿಸಿದ್ದಾರೆ. ರಾಜ್ಯ ಸರಕಾರವೂ ಸರಿಯಾದ ಮಧ್ಯ ಪ್ರವೇಶ ಮಾಡದೆ ಇದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.