ಮಂಗಳೂರು: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಯಾವುದೇ ಅನುದಾನ, ಯೋಜನೆ ನೀಡದೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಂಗಳೂರಿನ ಲಾಲ್ ಭಾಗ್ ನಲ್ಲಿರುವ ಗಾಂಧಿ ಪ್ರತಿಮೆಯ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಾತನಾಡಿ, ರಾಜ್ಯದ ತೆರಿಗೆ ಪಾಲು ನೀಡದೆ ಅನ್ಯಾಯ ಎಸಗಿದ್ದ ಕೇಂದ್ರ ಸರಕಾರ ಈ ಬಾರಿಯ ಬಜೆಟ್ ನಲ್ಲಿಯೂ ಚೊಂಬು ಮಾತ್ರ ನೀಡಿದೆ ಎಂದು ಟೀಕಿಸಿದರು.
ಇದನ್ನು ಓದಿ : ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸದಾಗಿ ಗುತ್ತಿಗೆದಾರರ ನೇಮಕ
ಮಾಜಿ ಸಚಿವ ರಮಾನಾಥ ರೈ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಸಚಿವ ಅಭಯ ಚಂದ್ರ ಜೈನ್, ಸದಾಶಿವ ಉಳ್ಳಾಲ, ಶಶಿಧರ ಹೆಗ್ಡೆ ಮೊದಲಾದವರು ಪಾಲ್ಗೊಂಡು ಖಾಲಿ ಚೊಂಬು ಪ್ರದರ್ಶಿಸಿದರು.
ಇದನ್ನು ನೋಡಿ : ರಾಜ್ಯ ಸರ್ಕಾರದಿಂದ ಡೆಂಗ್ಯೂ ಮಾರ್ಗಸೂಚಿ ಪ್ರಕಟJanashakthi Media