ನವದೆಹಲಿ| ಕೇರಳ ಬದಲು ‘ಕೇರಳಂ’ – ಹೆಸರ ಬದಲಾವಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸಚಿವ ಸಂಪುಟವು ಕೇರಳದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಬೇಕೆಂಬ ಕೇರಳ ಸರ್ಕಾರದ ಪ್ರಸ್ತಾವಕ್ಕೆ ಫೆಬ್ರವರಿ 24ರಂದು ಅನುಮೋದನೆ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೇರಳ ವಿಧಾನಸಭಾ ಚುನಾವಣೆ ಎದುರಾಗುವ ಹೊತ್ತಿನಲ್ಲಿ ಈ ಬೆಳವಣಿಗೆ ನಡೆದಿದೆ. ನವದೆಹಲಿ

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯ ತನ್ನ ಗೌರವ ಧನ ಹಣದಿಂದ ಬಸ್ ತಂಗುದಾಣ ನಿರ್ಮಾಣ

2024ರ ಜೂನ್​ 24ರಂದು ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸಲು ಸಾಂವಿಧಾನಿಕ ತಿದ್ದುಪಡಿ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿತ್ತು.

ಆ ಸಂದರ್ಭದಲ್ಲಿ ಮಾತನಾಡಿದ್ದ ಸಿಎಂ ಪಿಣರಾಯಿ ವಿಜಯನ್, ಮಲಯಾಳಂನಲ್ಲಿ ಕೇರಳಂ ಎಂದು ರಾಜ್ಯವನ್ನು ಕರೆಯಲಾಗುತ್ತದೆ. ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಬದಲಾಯಿಸಲು ಸಂವಿಧಾನದ 3ನೇ ವಿಧಿಯ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ನೋಡಿ: “ಪಶುಗಳು ಮೇವು ತಿನ್ನುವುದಿಲ್ಲವೇ? ಕಾರಣಗಳೇನು?” | ಡಾ. ಎನ್.‌ ಬಿ ಶ್ರೀಧರ Janashakthi Media

Donate Janashakthi Media

Leave a Reply

Your email address will not be published. Required fields are marked *