ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.
ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿತು.
ಈ ಕುರಿತು ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ರೈತರಿಗೆ ಬರ ಪರಿಹಾರ ನೀಡಲು ವಿಳಂಬ ಮಾಡಿದ್ದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಈ ವಾರದೊಳಗೆ ನಿರ್ಧಾರ ಕೈಗೊಳ್ಳಲು ಸಮ್ಮತಿಸಿದೆ. ಇದು ಕರ್ನಾಟಕದ ಜನತೆಗೆ ನ್ಯಾಯ ಮತ್ತು ಪರಿಹಾರಕ್ಕಾಗಿ ನಮ್ಮ ಸುದೀರ್ಘ ಹೋರಾಟದಲ್ಲಿ ಒಂದು ಮೈಲಿಗಲ್ಲು ಮತ್ತು ಯಶಸ್ಸು ಎಂದಿದ್ದಾರೆ.
ಇದನ್ನು ಓದಿ : ಡಿ.ಕೆ. ಶಿವಕುಮಾರ್ ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದೆ:ಡಿ.ಕೆ.ಸುರೇಶ್
2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಜ್ಞಾಪಕ ಪತ್ರದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಕರ್ನಾಟಕವು ಬರ ಪರಿಹಾರ ನಿಧಿಗಾಗಿ ನ್ಯಾಯಾಲಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಲು ರಾಜ್ಯಸರ್ಕಾರ ಒತ್ತಾಯಿಸಲಾಗಿತ್ತು.
ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಹೋರಾಟಕ್ಕೆ ಜಯ ಸಿಕ್ಕಿದೆ. ನಮ್ಮ ಪಾಲಿನ ಹಣ ಸಿಗಲೇ ಬೇಕು ಎಂದು ನ್ಯಾಯಲಯದ ಮೊರೆ ಹೋಗಿದ್ದೆವು ಅದರಂತೆ ನ್ಯಾಯ ಸಿಕ್ಕಿದೆ. ನಮ್ಮ ಪಾಲಿನ ತೆರಿಗೆ, ಬರ ಪರಿಹಾರ ಸಿಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು.
ಇನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್‌ನ ಮಧ್ಯಪ್ರವೇಶಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಕರ್ನಾಟಕದ ರೈತರಿಗೆ ಬರ ಪರಿಹಾರ ಹಣವನ್ನು ನೀಡಲು ವಿಳಂಬ ಮಾಡಿದ ಕೇಂದ್ರ ಸರ್ಕಾರವು ಈ ವಾರದೊಳಗೆ ನಿರ್ಧಾರವನ್ನು ತೆಗೆದುಕೊಳ್ಳಲು ಸಮ್ಮತಿಸಿದೆ. ನಮ್ಮ ಜ್ಞಾಪಕ ಪತ್ರದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳದ ಕಾರಣ ಕರ್ನಾಟಕವು ಬರ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಲು ಒತ್ತಾಯಿಸಲಾಯಿತು. ಇದು ಕರ್ನಾಟಕದ ಜನರಿಗೆ ನ್ಯಾಯ ಮತ್ತು ಪರಿಹಾರಕ್ಕಾಗಿ ನಮ್ಮ ಸುದೀರ್ಘ ಹೋರಾಟದಲ್ಲಿ ಒಂದು ಮೈಲಿಗಲ್ಲು ಮತ್ತು ಯಶಸ್ಸು ಎಂದು ಸಿದ್ದರಾಮಯ್ಯ ಎಂದಿದ್ದಾರೆ.
ಇದನ್ನು ನೋಡಿ : ರೈತ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡಿದ ಬಿಜೆಪಿಗೆ ರೈತರು ಓಟು ಹಾಕುವುದಿಲ್ಲ Janashakthi Media